*ಮೂಡುಬಿದಿರೆ :* ಯುವವಾಹಿನಿ (ರಿ.) ಮೂಡುಬಿದಿರೆ ಘಟಕ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರ ಮೂಡುಬಿದಿರೆ ಇವರ ಸಹಯೋಗದಲ್ಲಿ ಮಕ್ಕಳಿಗೆ ಒಂದು ವಾರಗಳ ಉಚಿತ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭವು ಮೂಡುಬಿದಿರೆಯ ಸಮಾಜ ಮಂದಿರದ ಸ್ವರ್ಣ ಮಂದಿರದಲ್ಲಿ ಆರಂಭಗೊಂಡಿತು. ಮಾಜಿ ಸಚಿವ ಅಭಯಚಂದ್ರ ಜೈನ್ ಉದ್ಘಾಟಿಸಿ ಮಾತನಾಡಿ,ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸಕ್ಕೆ ಹಾಗೂ ಅವರ ಭವಿಷ್ಯ ನಿರ್ಮಾಣಕ್ಕೆ ಮಹತ್ತರವಾದ ನೆರವು ನೀಡುತ್ತವೆ. ಸಂಸ್ಥೆ ಬಲಿಷ್ಠವಾಗಿದ್ದು, ಇದು ಎಲ್ಲಾ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಅಭಿಪ್ರಾಯಪಟ್ಟ ಅವರು, ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಶುಭಾಶಯಗಳನ್ನು ತಿಳಿಸಿದರು.
ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಅವರು ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ. ಕೆ. ಯುವವಾಹಿನಿಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ವಿವಿಧ ಚಟುವಟಿಕೆಗಳು ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ವಿವರಿಸಿ, ಇಂತಹ ಶಿಬಿರಗಳ ಮಹತ್ವವನ್ನು ಎತ್ತಿ ಹಿಡಿದರು.
ಘಟಕದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾಗಿಯೂ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರದ ನಿರ್ದೇಶಕರಾಗಿಯೂ ಇರುವ ಶುಭಲಕ್ಷ್ಮಿ ಅವರು ಬೇಸಿಗೆ ಶಿಬಿರದ ಕುರಿತು ಮಾಹಿತಿಗಳನ್ನು ನೀಡಿದರು. ಶಿಬಿರದಲ್ಲಿ ನಡೆಯಲಿರುವ ತರಬೇತಿಗಳು, ವಿದ್ಯಾರ್ಥಿಗಳಿಗೆ ದೊರೆಯುವ ಅನುಭವಗಳು ಹಾಗೂ ಅವರ ಕೌಶಲ್ಯವನ್ನು ವೃದ್ಧಿಸುವ ವಿವಿಧ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.
ಘಟಕದ ಕಾರ್ಯದರ್ಶಿ ಅಶ್ವಿನ್ ಪೂಜಾರಿ ಹಾಗೂ ಕೋಶಾಧಿಕಾರಿ ಜಯಶೀಲಾ ಎಸ್. ಪೂಜಾರಿ ಉಪಸ್ಥಿತರಿದ್ದರು.
ಶುಭಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


0 Comments