ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ

ಜಾಹೀರಾತು/Advertisment
ಜಾಹೀರಾತು/Advertisment
ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ
ಮೂಡುಬಿದಿರೆ: ಮೂಡುಬಿದಿರೆ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನೆ ಸಭೆಯು ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷರಾದ ಅರುಣ್‌ ಕುಮಾರ್‌ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆಯ ಕಚೇರಿಯಲ್ಲಿ ನಡೆಯಿತು.
  ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಸದಸ್ಯ ಕಾರ್ಯದರ್ಶಿ ಮಹೇಶ್‌ ಕುಮಾರ್‌ ಹೊಳ್ಳ ಅವರು ಜನಸಾಮಾನ್ಯರಿಗೆ ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕ ರೀತಿಯಲ್ಲಿ ತಲುಪಿ ಸೌಲಭ್ಯವನ್ನು ಪಡೆಯುವಲ್ಲಿ ಈ ಯೋಜನೆ ಯಶಸ್ವಿಯಾಗಬೇಕು ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವ್ಯವಸ್ಥೆಯ ನಾಮಫಲಕವನ್ನು ಮೂಡುಬಿದಿರೆಯ ಮುಖ್ಯ ಭಾಗದಲ್ಲಿ ತಾತ್ಕಾಲಿಕವಾಗಿ ಬಸ್‌ ತಂಗುವ ಸ್ಥಳದಲ್ಲಿ ಅಳವಡಿಸಬೇಕು. ಇದರಿಂದ ಜನರಿಗೆ ಬಹಳ ಅನುಕೂಲವಾಗಲಿದೆ. ಮಂಗಳೂರಿನಿಂದ ಮೂಡುಬಿದಿರೆ ಮಾರ್ಗವಾಗಿ ಸಾಗುವ ಸರಕಾರಿ ಬಸ್‌ ಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಮೀಣ ಪ್ರದೇಶವಾದ ನೆಲ್ಲಿಕಾರು, ಶಿರ್ತಾಡಿ, ಪುತ್ತಿಗೆ, ಅಶ್ವಥಪುರ, ನಿರ್ಕೆರೆ, ಬಜ್ಪೆ ಮಾರ್ಗವಾಗಿ ಮಂಗಳೂರಿಗೆ ತಲುಪುವಂತೆ ಬಸ್‌ ವ್ಯವಸ್ಥೆ ಹೊಸದಾಗಿ ಕಲ್ಪಿಸಬೇಕು ಎಂದು ಸದಸ್ಯರಾದ ಸುರೇಶ್‌ ದೇವಾಡಿಗ ಸಭೆಯಲ್ಲಿ ಪ್ರಸ್ತಾಪಿಸಿದರು. 
ಮುಂಗಾರು ಗಾಳಿ ಮಳೆಯಿಂದ ಅನೇಕ ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ಮೇಲೆ ಹಾಗೂ ವಿದ್ಯುತ್‌ ಕಂಬಗಳ ಮೇಲೆ ಉರುಳಿ ಬಿದ್ದ ಮರಗಳನ್ನು ಕೂಡಲೇ ತೆರವುಗೊಳಿಸುವಂತೆ ಅಧಿಕಾರಿಯವರಿಗೆ ಸೂಚಿಸಿದರು. ಗಾಳಿ ಮಳೆಗೆ 160 ಕಂಬಗಳು ಹಾಗೂ ಮತ್ತು ತಂತಿಗಳ ಮೇಲೆ ಮರಗಳು ಬಿದ್ದರುತ್ತದೆ. ಅದರಲ್ಲಿ 96 ಈಗಾಗಲೇ ಕೆಲಸ ಪೂರ್ಣಗೊಂಡು, 64 ಕಂಬಗಳ ಕೆಲಸವು ಚಾಲ್ತಿಯಲ್ಲಿರುತ್ತದೆ. ಈ ಸಮಸ್ಯೆಯನ್ನು ಬಗೆಹರಿಸಲು ಮಂಗಳೂರಿನಿಂದ ಹೆಚ್ಚುವರಿ ಲೈನ್‌ ಮ್ಯಾನ್‌ಗಳನ್ನು ನಿಯೋಜನೆಗೊಳಿಸಿ ವಿದ್ಯುತ್‌ ತಂತಿ ಹಾಗೂ ಕಂಬಗಳ ಕೆಲಸವನ್ನು ನಡೆಸಲಾಗುತ್ತಿದೆ ಎಂದು ಮೆಸ್ಕಾಂ ಇಲಾಖಾಧಿಗಳು ಸಭೆಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಪಂಚ ಗ್ಯಾರಂಟಿ ಯೋಜನೆಯ ವಿಷಯ ನಿರ್ವಾಹಕರಾದ ಸುನಂದಾ ಬಿ.ಜೈನ್‌ ಸ್ವಾಗತಿಸಿ, ವಂದಿಸಿದರು.

Post a Comment

0 Comments