ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ಅಧಿಕೃತ ರಾಜೀನಾಮೆ ನೀಡಿದ ಸಿದ್ದರಾಮಯ್ಯ

ಜಾಹೀರಾತು/Advertisment
ಜಾಹೀರಾತು/Advertisment
ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ಅಧಿಕೃತ ರಾಜೀನಾಮೆ ನೀಡಿದ ಸಿದ್ದರಾಮಯ್ಯ
ಮೂಡುಬಿದಿರೆ : ರಾಜ್ಯ ರಾಜಕೀಯದ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ದಾಖಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 

ತೀವ್ರ ರಾಜಕೀಯ ಜಿದ್ದಾಜಿದ್ದಿ ಹಾಗೂ ಹೈಕಮಾಂಡ್ ನಿರ್ದೇಶನದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಮಧ್ಯಾಹ್ನ ಬೆಂಗಳೂರಿನ ರಾಜಭವನಕ್ಕೆ (ಲೋಕಭವನ) ಆಗಮಿಸಿ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು. ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಅನುಪಸ್ಥಿತಿಯಲ್ಲಿ ರಾಜಭವನದ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು. ಒಂದು ಪುಟದ ರಾಜೀನಾಮೆ ಪತ್ರ ಸಲ್ಲಿಕೆಯಾಗಿದ್ದು, ಪ್ರಭುಶಂಕರ್ ಅವರು ರಾಜೀನಾಮೆ ಪತ್ರವನ್ನು ಸ್ವೀಕಾರ ಮಾಡಿದ್ದಾರೆ.


ವಿಶೇಷವೆಂದರೆ, ಹೈವೋಲ್ಟೇಜ್ ಉಪಾಹಾರ ಕೂಟದ ಬಳಿಕ ಸಿದ್ದರಾಮಯ್ಯ ಅವರು ತಮ್ಮ ಉತ್ತರಾಧಿಕಾರಿ ಎನ್ನಲಾದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಒಂದೇ ಕಪ್ಪು ಬಣ್ಣದ ರೇಂಜ್ ರೋವರ್ (Range Rover) ಕಾರಿನಲ್ಲಿ ರಾಜಭವನಕ್ಕೆ ಒಟ್ಟಿಗೆ ಆಗಮಿಸಿದ್ದು ಎಲ್ಲರ ಗಮನ ಸೆಳೆಯಿತು. ಅವರ ಜೊತೆಗೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಎಂ.ಸಿ. ಸುಧಾಕರ್ ಹಾಗೂ ಹಲವಾರು ಕಾಂಗ್ರೆಸ್ ಶಾಸಕರು ಸಹ ರಾಜಭವನಕ್ಕೆ ದೌಡಾಯಿಸಿದ್ದರು. ಸರ್ಕಾರದ ಮುಖ್ಯ ಕಾರ್ಯದರ್ಶಿ (CS) ಶಾಲಿನಿ ರಜನೀಶ್ ಅವರೂ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ರಾಜ್ಯಪಾಲರ ಅನುಪಸ್ಥಿತಿ: ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವೈಯಕ್ತಿಕ ಕಾರಣಗಳಿಗಾಗಿ ತುರ್ತಾಗಿ ಇಂದೋರ್‌ಗೆ ಪ್ರಯಾಣ ಬೆಳೆಸಿರುವ ಕಾರಣ, ಅವರು ಇಂದು ರಾಜಭವನದಲ್ಲಿ ಲಭ್ಯವಿರಲಿಲ್ಲ. ಹೀಗಾಗಿ, ರಾಜ್ಯಪಾಲರ ಮುನ್ಸೂಚನೆ ಹಾಗೂ ನಿಯಮಾವಳಿಗಳ ಪ್ರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಭಾವನದ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು.

Post a Comment

0 Comments