ಅಕ್ರಮ ಗೋಸಾಗಾಟ : ಇಬ್ಬರ ಬಂಧನ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

ಅಕ್ರಮ ಗೋಸಾಗಾಟ : ಇಬ್ಬರ ಬಂಧನ
ಮೂಡುಬಿದಿರೆ : ಅಕ್ರಮವಾಗಿ ಗೋಸಾಗಾಟ ಮಾಡುತ್ತಿರುವ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಇಮ್ರಾನ್ ಯಾನೆ ಇಬ್ರಾಹಿಂ, ಮೊಹಮ್ಮದ್ ಆರಿಫ್ ಎಂದು ಗುರುತಿಸಲಾಗಿದೆ.
ಪ್ರಕರಣದ ವಿವರ:
ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ.೧೪ ರಂದು ಬೆಳಗ್ಗೆ ೭ ಗಂಟೆಗೆ ಪಿಎಸ್‌ಐ ಕೃಷ್ಣಪ್ಪ ಮತ್ತು ಸಿಬ್ಬಂದಿಗಳು ರೌಂಡ್ಸ್‌ನಲ್ಲಿದ್ದಾಗ ಬೆಳುವಾಯಿ ಕಡೆಯಿಂದ ಮಾರ್ನಾಡು ಅಳಿಯೂರು ಕಡೆಗೆ ಮಾರುತಿ ಬ್ರೀಜಾ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ ಪೊಲೀಸರು ನಿಲ್ಲಿಸಲು ಪ್ರಯತ್ನಿಸಿದಾಗ ವಾಹನವನ್ನು ನಿಲ್ಲಿಸದೇ ಮುಂದೆ ಸಾಗಿದಾಗ ಬೆನ್ನಟ್ಟಿದ ಪೊಲೀಸರು, ಕಾರು ನಿಲ್ಲಿಸಿ ಓಡುತ್ತಿದ್ದವರನ್ನು ವಶಕ್ಕೆ ಪಡೆದು ಬಂಧಿಸಿದ್ದು, ಕಾರನ್ನು ಪರಿಶೀಲಿಸಿದಾಗ ಕಾರಿನ ಹಿಂಬದಿಯ ಸೀಟಿನಲ್ಲಿ ಒಂದು ಗಂಡು ದನವನ್ನು ಹಿಂಸಾತ್ಮಕವಾಗಿ ಕಟ್ಟಿರುವುದು ಪತ್ತೆಯಾಗಿದೆ.

ಆರೋಪಿಗಳು ಒಂದು ವಾರದಿಂದ ಬೇರೆ ಬೇರೆ ಕಡೆಗಳಿಂದ ದನಗಳನ್ನು ಕಳ್ಳತನ ಮಾಡಿಕೊಂಡು ಬಂದು ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ನಿವಾಸಿ ಸಾಹುಲ್ ಹಮೀದ್ ಅವರ ಮನೆಯ ಬಳಿ ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಸಲುವಾಗಿ ಅಥವಾ ದನಗಳನ್ನು ಕಡಿಯಲೆಂದು ಇತರರಿಗೆ ಮಾರಾಟ ಮಾಡುವ ಸಲುವಾಗಿ ಸಂಗ್ರಹಣೆ ಮಾಡಿರುವುದಾಗಿ ತಿಳಿಸಿರುತ್ತಾರೆ. 
ಆರೋಪಿಗಳಿಂದ ಒಂದು ಗಂಡು ದನ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿ ಮೊಹಮ್ಮದ್ ಆರಿಫ್ ಮೇಲೆ ಬೇರೆ ಬೇರೆ ಠಾಣೆಯಲ್ಲಿ ನಾಲ್ಕು ಪ್ರಕರಣ ಹಾಗೂ ಇಮ್ರಾನ್ ಮೇಲೆ ಐದು ಪ್ರಕರಣಗಳು ಈ ಮೊದಲು ದಾಖಲಾಗಿದೆ.

Post a Comment

0 Comments

Advertisement