ಮೂಡುಬಿದಿರೆ: ಬೀದಿ ನಾಯಿಯೊಂದು ರಸ್ತೆಗೆ ಅಡ್ಡವಾಗಿ ಬಂದ ಹಿನ್ನಲೆಯಲ್ಲಿ ಆಟೋ ರಿಕ್ಷಾವೊಂದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದ್ದು ಆಟೋ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಒಂಟಿಕಟ್ಟೆಯ ರಿಂಗ್ ಬಳಿ ಶನಿವಾರ ರಾತ್ರಿ ನಡೆದಿದೆ.
ಒಂಟಿಕಟ್ಟೆಯ ನಿವಾಸಿ ಆಟೋ ಚಾಲಕ ಕೃಷ್ಣಪ್ಪ ಅವರು ಮೂಡುಬಿದಿರೆ ಕಡೆಯಿಂದ ಒಂಟಿಕಟ್ಟೆ ಕಡೆಗೆ ಹೋಗುತ್ತಿದ್ದಾಗ ಒಂಟಿಕಟ್ಟೆ ಕ್ರಾಸ್ ಬಳಿ ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಆಟೋವನ್ನು ತಿರುಗಿಸುವ ವೇಳೆ ನಿಯಂತ್ರಣ ತಪ್ಪಿ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಗಾಯಗೊಂಡ ಕೃಷ್ಣಪ್ಪ ಅವರು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.


0 Comments