ಬನ್ನಡ್ಕ ಅಪಘಾತ : ದ್ವಿಚಕ್ರ ವಾಹನದ ಸಹ ಸವಾರೆ ಮೃತ್ಯು

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 ಬನ್ನಡ್ಕ ಅಪಘಾತ : ದ್ವಿಚಕ್ರ ವಾಹನದ ಸಹ ಸವಾರೆ ಮೃತ್ಯು

ಮೂಡುಬಿದಿರೆ: ಶುಕ್ರವಾರ ಬನ್ನಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ  ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್‌ನಲ್ಲಿದ್ದ ಮಹಿಳಾ ಸಹಸವಾರೆ ಮೃತಪಟ್ಟಿದ್ದಾರೆ. 


ಕಾರ್ಕಳದಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಖಾಸಗಿ ಬಸ್ ಬನ್ನಡ್ಕದ ಸೋನ್ಸ್ ಫಾರ್ಮ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗುವ ವೇಳೆ  ರಸ್ತೆಬದಿಯಲ್ಲಿ ಸಾಗುತ್ತಿದ್ದ ಸ್ಕೂಟರ್‌ಗೆ ಬಸ್ ಡಿಕ್ಕಿ ಹೊಡೆದು  ಸ್ಕೂಟರ್ ಸವಾರರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.


ಸ್ಕೂಟರ್‌ನಲ್ಲಿ ತಮ್ಮ ಸಂಬಂಧಿಕರೊಂದಿಗೆ ಸಹಸವಾರೆಯಾಗಿದ್ದ ಪಡುಮಾರ್ನಾಡು ಗ್ರಾಮ ಪಂಚಾಯ ವ್ಯಾಪ್ತಿಯ  ಮೂಡುಮಾರ್ನಾಡು ಗ್ರಾಮದ ಗೀತಾ(54) ಅವರು ತಲೆ ಹಾಗೂ ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

ಗೀತಾ ಮುಂಬೈಯಲ್ಲಿ ನೆಲೆಸಿದ್ದು, ರಜೆಯಲ್ಲಿ ಊರಿಗೆ ಬಂದಿದ್ದರು ಎಂದು ತಿಳಿದುಬಂದಿದೆ.


ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸ್ಕೂಟಿ ಸವಾರನನ್ನು ಕೂಡ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‌ನಲ್ಲಿದ್ದ ಹಲವು ಪ್ರಯಾಣಿಕರೂ ಗಾಯಗೊಂಡಿದ್ದರು.

Post a Comment

0 Comments

Advertisement