ಆಳ್ವಾಸ್ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ : 1,500ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗಾಭ್ಯಾಸ

ಜಾಹೀರಾತು/Advertisment
ಜಾಹೀರಾತು/Advertisment
ಆಳ್ವಾಸ್ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ : 1,500ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗಾಭ್ಯಾಸ
ಮೂಡುಬಿದಿರೆ: 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ‘ಆರೋಗ್ಯಕರ ವಯೋವೃದ್ಧಿಗಾಗಿ ಯೋಗ’ ಎಂಬ ಈ ವರ್ಷದ ಘೋಷವಾಕ್ಯದೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ದ ವಿವಿಧ ಶಿಕ್ಷಣ ಸಂಸ್ಥೆಗಳ 1,500ಕ್ಕೂ ಅಧಿಕ ವಿದ್ಯಾರ್ಥಿಗಳು ಭಾನುವಾರ ಬೆಳಿಗ್ಗೆ ಸಾಮೂಹಿಕ ಯೋಗಾಭ್ಯಾಸ ನಡೆಸುವ ಮೂಲಕ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿಲಾಯಿತು. 

ಮೂಡುಬಿದಿರೆಯ ವಿದ್ಯಾಗಿರಿಯ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದತಿಯಿಂದ ಆಯೋಜಿಸಲಾದ ಕಾರ್ಯಕ್ರಮವನ್ನು ಆಳ್ವಾಸ್ ಫಾರ್ಮಸಿ ವ್ಯವಸ್ಥಾಪಕ ನಿರ್ದೇಶಕಿ ಡಾ. ಗ್ರೀಷ್ಮಾ ವಿವೇಕ್ ಆಳ್ವ ಉದ್ಘಾಟಿಸಿದರು.
 ಖ್ಯಾತ ಸಂಗೀತ ನಿರ್ದೇಶಕ ವಿ. ಮನೋಹರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. 
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.
ಆಳ್ವಾಸ್ ಶಾಲೆ, ನಸಿ೯ಂಗ್ ಕಾಲೇಜು, ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು, ಆಯುರ್ವೇದ ವೈದ್ಯಕೀಯ ಕಾಲೇಜು, ಹೋಮಿಯೋಪತಿ ವೈದ್ಯಕೀಯ ಕಾಲೇಜು, ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ, ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಹಾಗೂ ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಸಾಮಾನ್ಯ ಯೋಗ ಪ್ರೊಟೋಕಾಲ್‍ಗೆ ಅನುಗುಣವಾಗಿ ವ್ಯಾಯಾಮ, ವಿವಿಧ ಆಸನಗಳು, ಪ್ರಾಣಾಯಾಮ ಹಾಗೂ ಧ್ಯಾನಾಭ್ಯಾಸಗಳನ್ನು ನಡೆಸಲಾಯಿತು.  

ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿ ಅನಂತ ಕೃಷ್ಣ ಮಾರ್ಗದರ್ಶನ ನೀಡಿದರು.

Post a Comment

0 Comments