ಮೂಡುಬಿದಿರೆ: ಮೇ 2026ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಬಿ.ಕಾಂ. ವಿದ್ಯಾರ್ಥಿಗಳಾದ ಗೋಡ್ವಿಲ್ ವಿಸ್ಟನ್ ವಾಸ್ (355) , ಶೆಟ್ಟಿ ರಾಹುಲ್ ಉಮೇಶ್(313), ಎನ್. ಚಿರಂತನಾ(312) ಹಾಗೂ ರೋಹಿತ್ ಪೂಜಾರಿ (304) ಗ್ರೂಪ್-01 ಮತ್ತು ಗ್ರೂಪ್-02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ.
ಇಂಟರ್ ಮೀಡಿಯಟ್ ಗ್ರೂಪ್-01 ವಿಭಾಗದಲ್ಲಿ ಪ್ರಸ್ಮಿಯಾ (162), ಪನ್ನಗ ಜೈನ್ (157), ವಿಜಯ್ ಕುಮಾರ್(164), ಸಾನಿಯಾ (150), ಪ್ರಸಿದ್ಧ್ ಪೂಜಾರಿ(150), ಮೋನಿಶಾ ಕುಂದರ್(163) ಹಾಗೂ ಶ್ರೇಯಾ ಸುರೇಂದ್ರ ಪೂಜಾರಿ(150) ಉತ್ತೀರ್ಣರಾಗಿರುತ್ತಾರೆ.
ಇಂಟರ್ ಮೀಡಿಯಟ್ ಗ್ರೂಪ್-02 ವಿಭಾಗದಲ್ಲಿ ಗಿರೀಶ್ (179) ಹಾಗೂ ತರುಣ್ ಕುಮಾರ್(152) ಅಂಕದೊAದಿಗೆ ಉತ್ತೀರ್ಣರಾಗಿದ್ದಾರೆ.
ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.


0 Comments