ಪರಿಸರ ದಿನಾಚರಣೆ : ಗಾಂಧಿನಗರ ಶಾಲೆಯಲ್ಲಿ ಚಿತ್ರಕಲಾ ಸ್ಪರ್ಧೆ

ಜಾಹೀರಾತು/Advertisment
ಜಾಹೀರಾತು/Advertisment
ಪರಿಸರ ದಿನಾಚರಣೆ : ಗಾಂಧಿನಗರ ಶಾಲೆಯಲ್ಲಿ ಚಿತ್ರಕಲಾ ಸ್ಪರ್ಧೆ 
ಮೂಡುಬಿದಿರೆ: ಇಲ್ಲಿನ ಗಾಂಧಿನಗರದ ದ. ಕ ಜಿ. ಪಂ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಯಿತು.
ಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ವಿದ್ಯಾರ್ಥಿಗಳಲ್ಲಿ ಹಸಿರು ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಮುಖ್ಯ ಶಿಕ್ಷಕಿ ಕಸ್ತೂರಿ ಎಚ್. ಪರಿಸರ ದಿನದ ಮಹತ್ವವನ್ನು ತಿಳಿಸಿದರು. ಪ್ರಕೃತಿಯನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದ್ದು, ವಿದ್ಯಾರ್ಥಿ ದೆಸೆಯಿಂದಲೇ ಗಿಡ-ಮರಗಳನ್ನು ಬೆಳೆಸುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದರು.
ಚಿತ್ರಕಲಾ ಸ್ಪರ್ಧೆ ನಡೆಯಿತು. ಶಿಕ್ಷಕಿಯರಾದ ಭವ್ಯ, ಸುಪ್ರೀತಾ ಉಪಸ್ಥಿತರಿದ್ದರು.

Post a Comment

0 Comments