ಡಿಕೆಶಿ ಪ್ರಮಾಣ ವಚನ : ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ನಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಜಾಹೀರಾತು/Advertisment
ಜಾಹೀರಾತು/Advertisment
ಡಿಕೆಶಿ ಪ್ರಮಾಣ ವಚನ : ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ನಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ
 
ಮೂಡುಬಿದಿರೆ : ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಸಂಭ್ರಮಾಚರಣೆ ನಡೆಯಿತು.  

 ಸಂಭ್ರಮಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಮೂಡುಬಿದಿರೆ ನಗರಾಧ್ಯಕ್ಷ ಜೊಸ್ಸಿ ಮಿನೇಜಸ್ ಅವರು ಡಿ. ಕೆ. ಶಿವಕುಮಾರ್ ಅವರು ರಾಜ್ಯದ 25ನೇ ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಡಿ. ಕೆ. ಯುಗ ಆರಂಭಗೊಂಡಿದೆ. ಇಲ್ಲಿನ 7 ಕೋಟಿ ಜನರಿಗೆ ಉತ್ತಮ ಆಡಳಿತವನ್ನು ನೀಡುತ್ತಾರೆಂಬ ಭರವಸೆಯಿದೆ ಎಂದರು.
   ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಪ್ರಿಯಾ ಡಿ. ಶೆಟ್ಟಿ ಮಾತನಾಡಿ ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿರುವುದು ಸಂತಸವಾಗಿದೆ. ರಾಜ್ಯದಲ್ಲಿ ಇನ್ನಷ್ಟು ಅಭಿವೃದ್ಧಿ ಕಾಯ೯ಗಳು ನಡೆಯಲಿ ಹಾಗೂ ಮಹಿಳೆಯರ ಪರ ಇನ್ನಷ್ಟು ಯೋಜನೆಗಳು ಜಾರಿಯಾಗಲಿ ಎಂದರು.  

ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. 
ಪುರಸಭಾ ಮಾಜಿ ಸದಸ್ಯರಾದ ಸುರೇಶ್ ಪ್ರಭು ಮತ್ತು ಸುರೇಶ್ ಕೋಟ್ಯಾನ್ ಶುಭ ಹಾರೈಸಿದರು. 

 ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಪುರಸಭೆಯ ಮಾಜಿ ಸದಸ್ಯರಾದ ಇಕ್ಬಾಲ್ ಕರೀಂ, ಮಮತಾ ಆನಂದ್, ನಾಮ ನಿದೇ೯ಶಿತ ಮಾಜಿ ಸದಸ್ಯರಾದ ವರುಣ್ ಕುಮಾರ್, ಸತೀಶ್ ಕೋಟ್ಯಾನ್, ಅಕ್ರಮ ಸಕ್ರಮ ಸಮಿತಿಯ ಸದಸ್ಯ ವಾಸುದೇವ ನಾಯಕ್, ಪ್ರಮುಖರಾದ ಪ್ರೇಮನಾಥ ಮಾರ್ಲ, ಸಂತೋಷ್ ಶೆಟ್ಟಿ, ಮನೋಜ್ ಮಾಲ೯, ಅಶ್ರಫ್ ಮರೋಡಿ, ರಿತಿಲ್ ಇತರರು ಉಪಸ್ಥಿತರಿದ್ದರು.

Post a Comment

0 Comments