ಮೂಡುಬಿದಿರೆ ಆಡಳಿತ ಸೌಧದಲ್ಲಿ ಕೆಂಪೇಗೌಡ ಜಯಂತಿ ಆಚರಣೆ

ಜಾಹೀರಾತು/Advertisment
ಜಾಹೀರಾತು/Advertisment
ಮೂಡುಬಿದಿರೆ ಆಡಳಿತ ಸೌಧದಲ್ಲಿ ಕೆಂಪೇಗೌಡ ಜಯಂತಿ ಆಚರಣೆ
ಮೂಡುಬಿದಿರೆ : ಬೆಂಗಳೂರುತಹಶೀಲ್ದಾರ್ ಪುಟ್ಟರಾಜು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಆಧುನಿಕವಾಗಿ ಬೆಳೆಯಲು ಅಡಿಗಲ್ಲು ಹಾಕಿದ ಅದಮ್ಯ ಚೇತನ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಮೂಡುಬಿದಿರೆ ಆಡಳಿತ ಸೌಧದಲ್ಲಿ ಶನಿವಾರ ಆಚರಿಸಲಾಯಿತು.
 
ಶಾಸಕ ಉಮಾನಾಥ ಕೋಟ್ಯಾನ್ ಅವರು ದೀಪ ಬೆಳಗಿಸಿ ಕೆಂಪೇಗೌಡ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿ ದೂರದೃಷ್ಟಿಯೊಂದಿಗೆ ಬೆಂಗಳೂರು ಅಭಿವೃದ್ಧಿ ಮಾಡಿದ ಕೆಂಪೇಗೌಡ ಕೆರೆ ರಸ್ತೆ ಪೇಟೆ ಗಿಡ ಮರಗಳನ್ನು ಕಟ್ಟಿಕೊಟ್ಟ ರೀತಿ ನಮಗೆಲ್ಲರಿಗೂ ಮಾದರಿ ಎಂದು ಹೇಳಿದರು. 
ಕೆಂಪೇಗೌಡ ಜಯಂತಿ ಪ್ರಯುಕ್ತ ಏರ್ಪಡಿಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಸಹಿತ ಬಹುಮಾನ ನೀಡಲಾಯಿತು. 
ತಾಲೂಕು ಗ್ಯಾರಂಟಿಸಮುದಾಯದ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ. ಅಕ್ಷತಾ ಭಾಗವಹಿಸಿದ್ದರು.

ತಹಶೀಲ್ದಾರ್ ಪುಟ್ಟರಾಜು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಮಕರಣಿಕ ಅಜು೯ನ್ ಕಾಯ೯ಕ್ರಮ ನಿರೂಪಿಸಿ ವಂದಿಸಿದರು.

Post a Comment

0 Comments