*ಮಹಾವೀರ ಕಾಲೇಜಿನಲ್ಲಿ ವಿದ್ಯಾಥಿ೯ಗಳಿಗೆ ಆನ್ಲೈನ್ ಮೂಲಕ ಮಾಹಿತಿ
ಮೂಡುಬಿದಿರೆ : ಅಂತರ್ರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಹಯೋಗದಲ್ಲಿ ರಾಜ್ಯದ 1000 ಕಾಲೇಜ್ ನಲ್ಲಿ ಆಯೋಜಿಸಿದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಮೂಡುಬಿದಿರೆ ತಾಲೂಕಿನ ಅಲಂಗಾರು ವಲಯದ ಕೊಡಂಗಲ್ಲು ಕಾರ್ಯಕ್ಷೇತ್ರದ ಮಹಾವೀರ ಕಾಲೇಜ್ ನ ವಿದ್ಯಾರ್ಥಿಗಳಿಗೆ ಮಂಗಳವಾರ ಆನ್ಲೈನ್ ಮೂಲಕ ತೋರಿಸಲಾಯಿತು.
ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಿತ್ತಬೈಲ್ ವಾಸುದೇವ ನಾಯಕ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.
ವಿದ್ಯಾರ್ಥಿಗಳಿಗೆ ಶ್ರೀ ಕ್ಷೇ. ಧಮ೯ಸ್ಥಳದ ಧಮಾ೯ಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮತ್ತು ಹೇಮಾವತಿ ಅವರು ದುಶ್ಚಟ ಮುಂಜಾಗ್ರತೆ ಕುರಿತು ಆನ್ಲೈನ್ ಮೂಲಕ ಮಾಹಿತಿ ನೀಡಿದರು.
ಕರ್ನಾಟಕ ರಾಜ್ಯ ಪೊಲೀಸ್ ಅಧಿಕಾರಿ ಹೆಚ್. ಎನ್. ವೆಂಕಟೇಶ್ ಪ್ರಸನ್ನ ಅವರು ದುಶ್ಚಟದಿಂದ ಆಗುವ ಪರಿಣಾಮ ಕುರಿತು ಸಮಗ್ರ ಮಾಹಿತಿ ಮಾರ್ಗದರ್ಶನ ನೀಡಿದರು.
ಈ ಸಂದರ್ಭ ಮಹಾವೀರ ಕಾಲೇಜ್ ನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ ಶೆಟ್ಟಿ, ಪ. ಪೂ. ಕಾಲೇಜಿನ ಪ್ರಾಂಶುಪಾಲೆ ವಿಜಯಲಕ್ಷ್ಮಿ, ಕೋಡಂಗಲ್ಲು ಒಕ್ಕೂಟದ ಅಧ್ಯಕ್ಷೆ ಪ್ರೇಮಶ್ರೀ ಉಪಸ್ಥಿತರಿದ್ದರು.
ಮೇಲ್ವಿಚಾರಕರಾದ ಚಂದ್ರಹಾಸ್ ಕಾರ್ಯಕ್ರಮ ನಿರೂಪಿಸಿದರು. ಸೇವಾಪ್ರತಿನಿಧಿ ಮಮತಾ ವಂದಿಸಿದರು.


0 Comments