ಮೂಡುಬಿದಿರೆ :ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೇ ನಿಲ್ದಾಣ ರಸ್ತೆಯಲ್ಲಿ ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿ ಆತನಿಂದ ಸುಮಾರು 2 ಲಕ್ಷ ಮೌಲ್ಯದ 4 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ
ಆರೋಪಿಯನ್ನು ಉಳ್ಳಾಲ ತಾಲೂಕಿನ ಕೋಟೆಕಾರ್ ಗ್ರಾಮದ ಹಿದಾಯತ್ ನಗರ ಮುಳ್ಳುಗುಡ್ಡೆಯ ಹಿದಾಯತ ಮಸೀದಿ ಸಮೀಪದ ನಿವಾಸಿ ಅಬ್ಬಾಸ್ (50) ಎಂದು ಗುರುತಿಸಲಾಗಿದೆ
ಗುರುವಾರದಂದು ಮುಲ್ಕಿ ರೈಲ್ವೇ ನಿಲ್ದಾಣ ರಸ್ತೆಯಲ್ಲಿ ಆರೋಪಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ವೇಳೆ ಮಾಹಿತಿ ಪಡೆದ ಮುಲ್ಕಿ ಪೊಲೀಸರು ಕಾರ್ಯಪ್ರವೃತ್ತರಾಗಿ ಆತನನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದ ವೇಳೆ ಆತನ ಬಳಿಯಿದ್ದ 4 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ
ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 45/2026ರಡಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ) ಮತ್ತು 20(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


0 Comments