ಪ್ರಧಾನಮಂತ್ರಿ ಸೂರ್ಯಘರ್‌ ಮುಫ್ತ್‌ ಬಿಜ್ಲಿ ಯೋಜನೆ: ಮಾದರಿ ಸೋಲಾರ್‌ ಗ್ರಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತಿಗೆ ಗ್ರಾಮ ಪಂಚಾಯತ್ ಆಯ್ಕೆ

ಜಾಹೀರಾತು/Advertisment
ಜಾಹೀರಾತು/Advertisment
ಪ್ರಧಾನಮಂತ್ರಿ ಸೂರ್ಯಘರ್‌ ಮುಫ್ತ್‌ ಬಿಜ್ಲಿ ಯೋಜನೆ: ಮಾದರಿ ಸೋಲಾರ್‌ 
ಗ್ರಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತಿಗೆ ಗ್ರಾಮ ಪಂಚಾಯತ್ ಆಯ್ಕೆ

ಮೂಡುಬಿದಿರೆ : ಪ್ರಧಾನಮಂತ್ರಿ ಸೂರ್ಯಘರ್‌ ಮುಫ್ತ್‌ ಬಿಜ್ಲಿ ಯೋಜನೆಯಡಿಯಲ್ಲಿ ಮಾದರಿ ಸೋಲಾರ್‌ ಗ್ರಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ಆಯ್ಕೆಯಾಗಿದೆ. 

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತಿಗೆ ಗ್ರಾಮ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಸೂರ್ಯಘರ್‌ ಯೋಜನೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದರಿ ಸೋಲಾರ್‌ ಗ್ರಾಮವನ್ನು ಆಯ್ಕೆಮಾಡುವ ಸಲುವಾಗಿ ಜಿಲ್ಲಾ ಮಟ್ಟದ ಸಮಿತಿಯಿಂದ ನಡೆದ ಸಭೆಯಲ್ಲಿ 13 ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ಸದರಿ ಗ್ರಾಮಗಳಲ್ಲಿ ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮದಲ್ಲಿ 31.12.2025 ರ ವರೆಗೆ ಅಳವಡಿಸಿದ ಸೋಲಾರ್‌ ಘಟಕಗಳ ಸಾಮರ್ಥ್ಯವು ಅಧಿಕವಾಗಿದೆ. ಸದರಿ ಗ್ರಾಮವನ್ನು 19.02.2026 ರಂದು ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾದರಿ ಸೋಲಾರ್‌ ಗ್ರಾಮವಾಗಿ ಆಯ್ಕೆ ಮಾಡಲಾಗಿದೆ. 
ಮಾದರಿ ಸೋಲಾರ್‌ ಗ್ರಾಮ ಅಭಿವೃದ್ದಿಗಾಗಿ ಈ ಗ್ರಾಮಕ್ಕೆ ನವ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯು ರೂ.1 ಕೋಟಿಯ ಸಹಾಯಧನವನ್ನು ಅನುಷ್ಟಾನಗೊಳಿಸುವ ಸಂಸ್ಥೆಗೆ ನೀಡುತ್ತದೆ. 
 ಉಡುಪಿ ಜಿಲ್ಲೆಯ ಕೋಟತಟ್ಟು ಗ್ರಾಮ ಪಂಚಾಯತ್ ಕೂಡಾ ಆಯ್ಕೆಯಾಗಿದೆ.
ಎಂದು ಮೆಸ್ಕಾಂ ಪ್ರಕಟಣೆ
ತಿಳಿಸಿದೆ.

Post a Comment

0 Comments