ವೈಬ್ರೆಂಟ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ದೈಹಿಕ-ಮಾನಸಿಕ ಸಮತೋಲನಕ್ಕೆ ಯೋಗಾಭ್ಯಾಸ ಅಗತ್ಯ: ಡಾ. ವೃಂದಾ ಬೆಡೇಕರ್

ಜಾಹೀರಾತು/Advertisment
ಜಾಹೀರಾತು/Advertisment
ವೈಬ್ರೆಂಟ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ದೈಹಿಕ-ಮಾನಸಿಕ ಸಮತೋಲನಕ್ಕೆ ಯೋಗಾಭ್ಯಾಸ ಅಗತ್ಯ: ಡಾ. ವೃಂದಾ ಬೆಡೇಕರ್

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಭಾನುವಾರ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.


ಡಾ.ವೃಂದಾ ಬೆಡೇಕರ್ ನೇತೃತ್ವದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಯೋಗದ ಮಹತ್ವ, ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಅದರ ಸಕಾರಾತ್ಮಕ ಪರಿಣಾಮಗಳು ಹಾಗೂ ದಿನನಿತ್ಯದ ಜೀವನದಲ್ಲಿ ಯೋಗಾಭ್ಯಾಸದ ಅಗತ್ಯತೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.ನಿಯಮಿತ ಯೋಗಾಭ್ಯಾಸವು ಏಕಾಗ್ರತೆಯನ್ನು ವೃದ್ಧಿಸುವುದರ ಜೊತೆಗೆ ಒತ್ತಡ ನಿವಾರಣೆ, ದೈಹಿಕ ಕ್ಷಮತೆ ಮತ್ತು ಮಾನಸಿಕ ಸಮತೋಲನ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿವಿಧ ಯೋಗಾಸನಗಳನ್ನು ಅಭ್ಯಾಸ ಮಾಡಿದರು.


ಕಾಲೇಜಿನ ಪ್ರಾಂಶುಪಾಲ, ಟ್ರಸ್ಟಿ ಡಾ. ಎಸ್. ಎನ್. ವೆಂಕಟೇಶ್ ನಾಯಕ್, ಟ್ರಸ್ಟಿಗಳಾದ ಸುಭಾಷ್ ಝಾ, ಡಾ. ಶರತ್ ಗೋರೆ, ಮೆಹಬೂಬ್ ಬಾಷಾ, ಚಂದ್ರಶೇಖರ್ ರಾಜೇ ಅರಸ್ ಮತ್ತು ಯೋಗೇಶ್ ಬೆಡೇಕರ್ ಉಪಸ್ಥಿತರಿದ್ದರು.

Post a Comment

0 Comments