ನಾರಾವಿ ಸೂರ್ಯನಾರಾಯಣ ಭಜನಾ ಮಂಡಳಿಯ ಕ್ರೀಡೋತ್ಸವ, ಸಾಧಕ ಭಜಕರಿಗೆ ಗೌರವಾರ್ಪಣೆ ಹಾಗೂ ಭಜನೋತ್ಸವ ಕಾರ್ಯಕ್ರಮದ ಪೂರ್ವಭಾವಿ

ಜಾಹೀರಾತು/Advertisment

ಮೂಡುಬಿದಿರೆ : ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಸೂರ್ಯನಾರಾಯಣ ಭಜನಾ ಮಂಡಳಿಯ ಕ್ರೀಡೋತ್ಸವ, ಸಾಧಕ ಭಜಕರಿಗೆ ಗೌರವಾರ್ಪಣೆ ಹಾಗೂ ಭಜನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ಭಾನುವಾರ ನಡೆಯಿತು. 

 ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ. ಅಳಿಯೂರು ಅವರು ಮಾತನಾಡಿ, ಭಜನೆಯ ಮೂಲಕ ಸಮಾಜದಲ್ಲಿ ಒಗ್ಗಟ್ಟು ವೃದ್ಧಿಯಾಗಬೇಕು. ಪ್ರತಿಯೊಬ್ಬರೂ ದೇವಸ್ಥಾನಗಳಲ್ಲಿ ಭಜನಾ ಸೇವೆ ಸಲ್ಲಿಸಬೇಕು. ಯಾವುದೇ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಅವುಗಳನ್ನು ಸರಿಪಡಿಸಿಕೊಂಡು ಭಜನಾ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ವಲಯದ ಎಲ್ಲಾ ಭಜನಾ ಮಂಡಳಿಗಳಿಂದ ನಿಯಮಿತ ಭಜನಾ ಸೇವೆ ನಡೆಸುವ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು. 

ಜೂನ್ 28ರಂದು ಭಜನಾ ಮಂಡಳಿಯ ಸದಸ್ಯರು, ಪೋಷಕರು ಹಾಗೂ ಸ್ಥಳೀಯರಿಗಾಗಿ ಕ್ರೀಡಾಕೂಟ ಆಯೋಜಿಸಲು ನಿರ್ಧರಿಸಲಾಯಿತು.

 ಅಶೋಕ್ ನಾಯ್ಕ್ ಕಳಸಬೈಲು ಅವರು ಮಾತನಾಡಿ, ಮಕ್ಕಳ ಭಜನಾ ತರಬೇತಿ, ಸಂಸ್ಕಾರ ಹಾಗೂ ಭಕ್ತಿ ಚಟುವಟಿಕೆಗಳ ಬೆಳವಣಿಗೆಗಾಗಿ ಪೋಷಕರು ಇನ್ನಷ್ಟು ಸಹಕಾರ ನೀಡುವಂತೆ ಮನವಿ ಮಾಡಿದರು.

ಸಭೆಯಲ್ಲಿ ಮಂಡಳಿಯ ಅಧ್ಯಕ್ಷರಾದ  ಸುಜಯ, ಭಾಸ್ಕರ್ ಕುಲಾಲ್ ಕೋಟೆಬಾಗಿಲು, ಪ್ರಸಾಂತ್ ಎಡಪದವು, ಕಲ್ಲಮುಂಡ್ಕೂರು ರೀತಿಕಾ, ಅಕ್ಷಿತಾ ಚಿಟ್ಟೆಮಾರ್, ಪೋಷಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Post a Comment

0 Comments