ಜುಲೈ 14 ರಂದು ದ.ಕ.ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಮೇಳ

ಜಾಹೀರಾತು/Advertisment
ಜಾಹೀರಾತು/Advertisment
ಜುಲೈ 14 ರಂದು ದ.ಕ.ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಮೇಳ
ಮೂಡುಬಿದಿರೆ: ಮೂಡುಬಿದಿರೆ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನೆ ಸಭೆಯು ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷರಾದ ಅರುಣ್‌ ಕುಮಾರ್‌ ಶೆಟ್ಟಿ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆಯ ಕಚೇರಿಯಲ್ಲಿ ನಡೆಯಿತು.
ಮೆಸ್ಕಾಂನ ಸಹಾಯಕ ಲೆಕ್ಕಾಧಿಕಾರಿ ರವಿಚಂದ್ರ ಕೋಟ್ಯಾನ್ ಅವರು ಗ್ರಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ನಡೆಯಲಿದೆ ಎಂದರು. 

ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಅರುಣ್‌ ಕುಮಾರ್‌ ಶೆಟ್ಟಿ ಮಾತನಾಡಿ ಮೆಸ್ಕಾಂ ಸಿಬ್ಬಂದಿಗಳು ಬರುವಾಗ ಫಲಾನುಭವಿಗಳು ಸರಿಯಾದ ಮಾಹಿತಿಯನ್ನು ನೀಡಲು ಗ್ಯಾರಂಟಿ ಯೋಜನೆಯ ಸದಸ್ಯರಲ್ಲಿ ಸಹಕಾರ ನೀಡುವಂತೆ ಸಭೆಯಲ್ಲಿ ತಿಳಿಸಿದರು.

ಶಕ್ತಿಯೋಜನೆಯಡಿ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ಪಡೆಯಲು ಸೇವಾ ಸಿಂಧು ಮೂಲಕ ಆನ್‌ ಲೈನ್‌ ನೊಂದಾವಣೆ ಮಾಡಿಕೊಂಡು, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ ಅನ್ನು ಮಂಗಳೂರಿನ ಕರ್ನಾಟಕ ಒನ್‌ ಕಚೇರಿಯಲ್ಲಿ ಪಡೆಯಬಹುದು ಎಂದು ತಿಳಿಸಿದರು. 

ಯುವನಿಧಿ ಯೋಜನೆಯಲ್ಲಿ ಒಟ್ಟು 302 ಫಲಾನುಭವಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆದಿರುತ್ತಾರೆ. ಮೂಡುಬಿದಿರೆ ತಾಲೂಕಿನಲ್ಲಿ ಒಟ್ಟು82,84,500 ಡಿ.ಬಿ.ಟಿ. ಮೂಲಕ ಹಣ ಪಾವತಿ ಪಡೆದಿರುತ್ತಾರೆ. ಜುಲೈ 14 ರಂದು ಉದ್ಯೋಗವಿನಿಮಯ ಕಚೇರಿಯಲ್ಲಿ ಐಟಿಐ, ಡಿಪ್ಲೋಮಾ, ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪೂರ್ಣಗೊಂಡಿರುವವರಿಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಆಸಕ್ತ ಫಲಾನುಭವಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಯುವನಿಧಿ ಯೋಜನಾಧಿಕಾರಿ
ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಸದಸ್ಯ ಕಾರ್ಯದರ್ಶಿಗಳಾದ ಮಹೇಶ್‌ ಕುಮಾರ್‌ ಹೊಳ್ಳ, 
ಯುವನಿಧಿಯ ಪ್ರಥಮ ದರ್ಜೆ ಲೆಕ್ಕ ಸಹಾಯಕರು -ಅರುಣ್ ಕುಮಾರ್, ಯುವನಿಧಿ 
ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರು, ಹಾಗೂ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. 

ಪಂಚ ಗ್ಯಾರಂಟಿ ಯೋಜನೆಯ ವಿಷಯ ನಿರ್ವಾಹಕರಾದ ಸುನಂದಾ ಬಿ.ಜೈನ್‌ ಸ್ವಾಗತಿಸಿ, ವಂದಿಸಿದರು.

Post a Comment

0 Comments