ತೀವೃ ಮಳೆ : ಜುಲೈ. 2ರಂದು ಅಂಗನವಾಡಿ ಸಹಿತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಜಾಹೀರಾತು/Advertisment
ಜಾಹೀರಾತು/Advertisment
ತೀವೃ ಮಳೆ : ಜುಲೈ. 2ರಂದು ಅಂಗನವಾಡಿ ಸಹಿತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ರೆಡ್ ಅಲರ್ಟ್ ಘೋಷಿಸಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಜುಲೈ 2ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ.


ಮೂಡುಬಿದಿರೆ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ಧಾರಾಕಾರ ಮಳೆಯ ಸಾಧ್ಯತೆ ಇರುವುದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಜಿಲ್ಲಾಡಳಿತ ಮತ್ತು ಹವಾಮಾನ ಇಲಾಖೆ ನೀಡಿರುವ ಮುನ್ನೆಚ್ಚರಿಕೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಲಾಗಿದೆ.


ನದಿ, ಜಲಪಾತ ಹಾಗೂ ಸಮುದ್ರ ತೀರ ಪ್ರದೇಶಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರು ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಪಾಲಕರು ಮಕ್ಕಳನ್ನು ನೀರಿರುವ ತಗ್ಗು ಪ್ರದೇಶ, ಕೆರೆ ಹಾಗೂ ನದಿತೀರಗಳಿಗೆ ಹೋಗದಂತೆ ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣೆಗೆ ಸಜ್ಜಾಗಿರುವಂತೆ ಜಿಲ್ಲಾಡಳಿತ ನಿರ್ದೇಶನ ನೀಡಿದೆ.

Post a Comment

0 Comments