ಮಾಣಿ-ಸಂಪಾಜೆ ಹೆದ್ದಾರಿ ದುರಸ್ತಿಗೆ ₹49 ಕೋಟಿ ಅನುದಾನ ಮಂಜೂರು

ಜಾಹೀರಾತು/Advertisment
ಜಾಹೀರಾತು/Advertisment
ಮಾಣಿ-ಸಂಪಾಜೆ ಹೆದ್ದಾರಿ ದುರಸ್ತಿಗೆ ₹49 ಕೋಟಿ ಅನುದಾನ ಮಂಜೂರು 
 
ಮೂಡುಬಿದಿರೆ : ರಾಷ್ಟ್ರೀಯ ಹೆದ್ದಾರಿ 275ರ ಮಾಣಿ-ಸಂಪಾಜೆ ಹೆದ್ದಾರಿಯ ದುರಸ್ತಿ ಕಾಮಗಾರಿಗಳಿಗಾಗಿ ಕೇಂದ್ರ ಸರ್ಕಾರವು ₹49.22 ಕೋಟಿ ವಿಶೇಷ ಅನುದಾನ ಮಂಜೂರು ಮಾಡಿದೆ.

ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ವಿ. ಉಮಾಶಂಕರ್ ಅವರನ್ನು ನವದೆಹಲಿಯಲ್ಲಿ ಮಂಗಳವಾರ ಭೇಟಿ ಮಾಡಿ ಹೆದ್ದಾರಿಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಪ್ರಕ್ರಿಯೆ ತ್ವರಿತಗೊಳಿಸುವಂತೆ ಕೋರಿ ಚರ್ಚಿಸಿದರು.
ಮಾಣಿ-ಸಂಪಾಜೆ ರಸ್ತೆಯ ಅಭಿವೃದ್ಧಿ ಯೋಜನೆಗೆ ಶೀಘ್ರದಲ್ಲೇ ವಿನ್ಯಾಸ ಅನುಮೋದನೆ ಹಾಗೂ ಆಡಳಿತಾತ್ಮಕ ಒಪ್ಪಿಗೆ ನೀಡುವಂತೆ ಒತ್ತಾಯಿಸಿದರು. 

ಈ ಮಾರ್ಗದಲ್ಲಿ ಸಂಚಾರ ಸುರಕ್ಷತೆ ಹೆಚ್ಚಿಸಲು ಹಾಗೂ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಮೂಲಕ ಪ್ರಾದೇಶಿಕ ಆರ್ಥಿಕ ಬೆಳವಣಿಗೆಗೆ ಯೋಜನೆಯನ್ನು ಕಾಲಮಿತಿಯೊಳಗೆ ಅನುಷ್ಠಾನ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಮಂಗಳೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇಯ ಮಹತ್ವದ ಭಾಗವಾಗಿರುವ ಶಿರಾಡಿ ಘಾಟ್ ಸುರಂಗ ರಸ್ತೆ ವಿನ್ಯಾಸಕ್ಕೆ 'ವಿನ್ಯಾಸ ಅನುಮೋದನಾ ಸಮಿತಿ' ಒಪ್ಪಿಗೆ ನೀಡಿದೆ.
ಪ್ರಸ್ತುತ ಈ ಯೋಜನೆಯ ವಿಸ್ತೃತ ಯೋಜನಾ ವರದಿ ತಯಾರಿಸಲಾಗುತ್ತಿದ್ದು, ಇದರೊಂದಿಗೆ ಪರಿಸರ, ಅರಣ್ಯ ಮತ್ತು ವನ್ಯಜೀವಿ ಇಲಾಖೆ ಅನುಮತಿ ಪಡೆಯುವ ಪ್ರಕ್ರಿಯೆಗಳು ಪ್ರಗತಿಯಲ್ಲಿವೆ ಎಂದು ಚೌಟ ಮಾಹಿತಿ ನೀಡಿದರು.
ದಕ್ಷಿಣ ಕನ್ನಡದ ರಸ್ತೆಗಳ ಮೂಲಸೌಕರ್ಯ ಅಭಿವೃದ್ಧಿಯ ಜೊತೆಗೆ ಮಂಗಳೂರು- ಬೆಂಗಳೂರು ನಡುವಿನ ಸಂಪರ್ಕವನ್ನು ಇನ್ನಷ್ಟು ಬಲಪಡಿಸುವುದು ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದರು.

Post a Comment

0 Comments