*ಬಂಟ್ವಾಳ: ಬಸ್ ನಿಲ್ದಾಣದಲ್ಲಿದ್ದ ವಿದ್ಯಾರ್ಥಿನಿಗೆ ಚೂರಿ ಇರಿದು ಯುವಕ ಪರಾರಿ*
*ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆ*
*ವ್ಯಾಪ್ತಿಯ ಮೋಂತಿಮಾರು ಪಡ್ಡು ಎಂಬಲ್ಲಿ ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಕಾಲೇಜಿಗೆ ತೆರಳಲು ಬಸ್ಸಿಗೆ ಕಾಯುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಯುವಕನೊಬ್ಬ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದಾನೆ.*
*ಸ್ಥಳೀಯ ಮೋಂತಿಮಾರು ಪಡ್ಡು ನಿವಾಸಿ ಜವ್ವಾರ್ (28) ಚೂರಿ ಇರಿದ ಆರೋಪಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ.*
*ಆರೋಪಿ ಬಸ್ ನಿಲ್ದಾಣದ ಸಮೀಪ ದಿನಸಿ ಅಂಗಡಿ ನಡೆಸುತ್ತಿದ್ದಾನೆ ಎನ್ನಲಾಗಿದೆ.*
*ವಿದ್ಯಾರ್ಥಿನಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿ ಚೂರಿಯಿಂದ ಹಲ್ಲೆ ನಡೆಸಿದ್ದಾನೆ. ಈ ಸಂದರ್ಭದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಇತರ ಪ್ರಯಾಣಿಕರು ಘಟನೆ ಕಂಡು ಜೋರಾಗಿ ಕಿರುಚಿದ ಪರಿಣಾಮ ಆರೋಪಿ ನಿಂದ ಪರಾರಿಯಾಗಿದ್ದಾನೆ.*



0 Comments