ಮೂಡುಬಿದಿರೆ : ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಜವಬ್ದಾರಿಯ ಪ್ರಜ್ಞೆ ಹಾಗೂ ಪ್ರಜಾಪ್ರಭುತ್ವದ
ಮೌಲ್ಯಗಳನ್ನು ಬೆಳೆಸುವಲ್ಲಿ ಶಾಲಾ ಸಂಸತ್ತು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ ಎಂದು ವಿವೇಕಾನಂದ
ವಿದ್ಯಾವರ್ಧಕ ಸಂಘ ಪುತ್ತೂರು ಇದರ ನಿರ್ದೇಶಕರಾದ ರವೀಂದ್ರ ಪುತ್ತೂರು ಹೇಳಿದರು.
ಅವರು ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾದ
ನೂತನ ಶಾಲಾ ಸಂಸತ್ತಿನ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
“ಶಾಲಾ ಸಂಸತ್ತು ಎಂಬುದು ಕೇವಲ ವಿದ್ಯಾರ್ಥಿಗಳಿಗೆ ಹುದ್ದೆ ನೀಡುವ ಕಾರ್ಯಕ್ರಮವಲ್ಲ; ಅದು ಭವಿಷ್ಯದ ಉತ್ತಮ
ನಾಯಕರು, ಜವಾಬ್ದಾರಿಯುತ ನಾಗರಿಕರು ಹಾಗೂ ಸಮಾಜಮುಖಿ ವ್ಯಕ್ತಿತ್ವಗಳನ್ನು ರೂಪಿಸುವ ಪ್ರಜಾಪ್ರಭುತ್ವದ
ಪಾಠಶಾಲೆಯಾಗಿದೆ. ವಿದ್ಯಾರ್ಥಿಗಳು ಇಂದು ಶಾಲಾ ಸಂಸತ್ತಿನ ಮೂಲಕ ಕಲಿಯುವ ನಾಯಕತ್ವ, ಶಿಸ್ತು, ಸಮಯಪಾಲನೆ,
ಸೇವಾ ಮನೋಭಾವ ಮತ್ತು ಜವಬ್ದಾರಿಯ ಗುಣಗಳು ಇರುವವರು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಪ್ರಭಾವ
ಬೀರುತ್ತಾರೆ ಎಂದರು.
ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡಿ, ಮತದಾನ ಪ್ರತಿಯೊಬ್ಬರ ಹಕ್ಕು ಅಂತಹ ಹಕ್ಕನ್ನು ನಾವು
ಸರಿಯಾದ ವ್ಯಕ್ತಿಗೆ ನೀಡಬೇಕು. ವಿದ್ಯಾರ್ಥಿಗಳು ಒಳ್ಳೊಳ್ಳೆ ನಾಯಕರುಗಳನ್ನು ಮಾದರಿಯಾಗಿ ತೆಗೆದುಕೊಂಡು ಅತ್ಯುತ್ತಮ
ನಾಯಕರಾಗಬೇಕು, ಒಳ್ಳೆಯ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ. ಬಿ.ಪಿ ಸಂಪತ್ ಕುಮಾರ್, ಸಿಬಿಎಸ್‌ಸಿ
ಶಾಲೆಯ ಪ್ರಾಂಶುಪಾಲರಾದ ಶ್ರೀಪ್ರಸಾದ್, ಶಿಕ್ಷಕ-ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಾಲಾ ಸಂಸತ್ತಿನ ನಾಯಕನಾಗಿ ಋಷಿಕೇಶ್ ಎ ಮಿನಾಚೆ, ಉಪನಾಯಕ ನಿಶಾಂತ್ ರಾಜ್, ಸ್ಪೀಕರ್ ನಿಹಾರಿಕ, ಶಿಕ್ಷಣ ಮತ್ತು
ಸಾಂಸ್ಕೃತಿಕ ಮಂತ್ರಿ ಸಯ್ಯದಾ ಆನಂ, ಶಿಸ್ತು ಮಂತ್ರಿ ದೃಷ್ಠಿ, ಕ್ರೀಡಾ ಮಂತ್ರಿ ಚೇತನ್, ಜಲಶಕ್ತಿ ಮಂತ್ರಿ ಸಾನ್ವಿಕಾ ಹಾಗೂ
ವಿರೋಧ ಪಕ್ಷದ ನಾಯಕಿಯಾಗಿ ತನ್ವಿ ಪೂಜಾರಿ ತಮ್ಮ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಉಪಮುಖ್ಯೋಪಾಧ್ಯಾಯರಾದ
ಜಯಶೀಲ ಬೆಳ್ತಂಗಡಿ ಕ್ಷೇತ್ರದ ಜನಪ್ರಿಯ ಶಾಸಕರಾದ ಹರೀಶ್ ಪೂಂಜಾ ಅವರು ಕಾರ್ಯಕ್ರಮದ ಕುರಿತಾಗಿ ಕಳುಹಿಸಿದ
ಶುಭ ನುಡಿಗಳ ಸಂದೇಶವನ್ನು ವಾಚಿಸಿದರು. ಶಿಕ್ಷಕಿ ರಶ್ಮಿ ಅತಿಥಿಗಳನ್ನು ಪರಿಚಯಿಸಿದರು. ಶಿಕ್ಷಕಿ ಸ್ವರ್ಣಲತಾ ಸಂಸತ್ತಿನ
ನೂತನ ನಾಯಕರ ಪದಗ್ರಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಶಿಕ್ಷಕಿ ವನಿತಾ ಪ್ರತಿಜ್ಞಾವಿಧಿ ಬೋಧಿಸಿದರು. ಶಾಲಾ
ಸಂಸತ್ತಿನ ನಾಯಕ ಋಷಿಕೇಶ್ ನಾಯಕನ ಜವಬ್ದಾರಿಗಳನ್ನು, ಶಿಸ್ತು ಮಂತ್ರಿ ದೃಷ್ಠಿ, ವಿರೋಧ ಪಕ್ಷದ ನಾಯಕಿ ತನ್ವಿ
ಪೂಜಾರಿ ತಮ್ಮ ತಮ್ಮ ಜವಬ್ದಾರಿಗಳನ್ನು ವಾಚಿಸಿದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್
ಸ್ವಾಗತಿಸಿದರು. ಶಿಕ್ಷಕಿ ಜಯಲಕ್ಷ್ಮಿ ಕಾಯ೯ಕ್ರಮ ನಿರೂಪಿಸಿದರು. ಸ್ಪೀಕರ್ ನಿಹಾರಿಕ ವಂದಿಸಿದರು.


0 Comments