ಮೂಡುಬಿದಿರೆ: ಜುಲೈ.3 ಗುರುವಾರದಿಂದ ನಾಪತ್ತೆಯಾಗಿದ್ದ ಅಲಂಗಾರು ಆಶ್ರಯ ಕಾಲೋನಿ ಸಮೀಪದ ಬಂಗೇರಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (34) ಎಂಬವರ ಮೃತದೇಹವು ಶನಿವಾರ ಬೆಳಿಗ್ಗೆ ಮನೆಯ ಸಮೀಪದ ಶೆಡ್ ಹೊರಗೆ ಪತ್ತೆಯಾಗಿದೆ. ಕಾತಿ೯ಕ್ ಅವರು ಅವಿವಾಹಿತರಾಗಿದ್ದು ಹಿಟಾಚಿ ಹಾಗೂ ಜೆಎಸ್‌ಬಿ ಗುತ್ತಿಗೆದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಾಥಮಿಕವಾಗಿ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಳಿಕ ನಿಖರ ಕಾರಣ ತಿಳಿದು ಬರಲಿದೆ.


0 Comments