ಎಕ್ಸಲೆಂಟ್ ಶಾಲೆಗೆ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಾಂಪಿಯನ್ ಪಟ್ಟ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

ಎಕ್ಸಲೆಂಟ್ ಶಾಲೆಗೆ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಾಂಪಿಯನ್ ಪಟ್ಟ 

ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ಮೂಡುಬಿದಿರೆಯ ಕನ್ನಡ ಭವನದಲ್ಲಿ ನಡೆದ ರಾಜ್ಯಪಟ್ಟದ ವಿವಿಧ ವಿಭಾಗಗಳ ಕರಾಟೆ ಸ್ಪರ್ಧೆಯಲ್ಲಿ ಅಮೋಘ ಪ್ರದರ್ಶನ ನೀಡುವುದರೊಂದಿಗೆ ಹಲವು ಬಹುಮಾನಗಳನ್ನು ಗಳಿಸಿ ಚಾಂಪಿಯನ್ ಪಟ್ಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. 

ವಿವಿಧ ವಿಭಾಗಗಳಲ್ಲಿ ನಡೆದ ಕರಾಟೆ ಸ್ಪರ್ಧೆಯಲ್ಲಿ ಒಟ್ಟು 8 ಚಿನ್ನದ ಪದಕ, 7 ಬೆಳ್ಳಿ ಪದಕ ಮತ್ತು 4 ಕಂಚಿನ ಪದಕಗಳಿಗೆ ಎಕ್ಸಲೆಂಟ್ ಶಾಲೆಯ ವಿದ್ಯಾರ್ಥಿಗಳು ಭಾಜನರಾಗಿದ್ದಾರೆ. 

ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಆಡಳಿತ ನಿರ್ದೇಶಕ ಡಾ.ಬಿ.ಪಿ. ಸಂಪತ್ ಕುಮಾರ್, ಶೈಕ್ಷಣಿಕ ನಿರ್ದೇಶಕ ಪುಷ್ಪರಾಜ್, ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್, ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Post a Comment

0 Comments

Advertisement