ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಪ್ರತಿಷ್ಠಿತ ಅಫೆಕ್ಸ್ ಪ್ರಶಸ್ತಿ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಪ್ರತಿಷ್ಠಿತ ಅಫೆಕ್ಸ್ ಪ್ರಶಸ್ತಿ 

ಮೂಡುಬಿದಿರೆ : ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ ವ್ಯವಹಾರ ಪರಿಗಣಿಸಿ ಪ್ರತಿಷ್ಠಿತ ಅಪೆಕ್ಸ್ ಪ್ರಶಸ್ತಿ ನೀಡಲಾಗಿದೆ.

ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಹಾಗೂ ಬೆಳುವಾಯಿ ಸಹಕಾರಿ ಸಂಘದ ಅಧ್ಯಕ್ಷ ಭಾಸ್ಕರ್ ಎಸ್ ಕೋಟ್ಯಾನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಭಟ್ ಅವರನ್ನು ಮಹಾಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್ ಹಾಗೂ ನಿರ್ದೇಶಕರುಗಳು ಪ್ರಶಸ್ತಿ ಪ್ರದಾನ ಮಾಡಿದರು.

ಬೆಳುವಾಯಿ ಸಂಘವು ವಾರ್ಷಿಕ 552ಕೋಟಿಗೂ ಮೀರಿ ವ್ಯವಹಾರ ನಡೆಸುತ್ತಿದ್ದು ಸದಸ್ಯರಿಗೆ ಹಲವು ವರ್ಷಗಳಿಂದ ಶೇ 25 ಲಾಭಾಂಶ ವಿತರಣೆ ಮಾಡುತ್ತಿದೆ.

Post a Comment

0 Comments

Advertisement