ಶಿಕ್ಷಕರ ಸಮಸ್ಯೆಗೆ ಸಂಘ ಸ್ಪಂದಿಸಲಿ:ಅಭಯ ಚಂದ್ರ ಜೈನ್

ಶಿಕ್ಷಕರ ಸಮಸ್ಯೆಗೆ ಸಂಘ ಸ್ಪಂದಿಸಲಿ:ಅಭಯ ಚಂದ್ರ ಜೈನ್
ಮೂಡುಬಿದಿರೆ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಿಕ್ಷಕರ ಸಮಸ್ಯೆಗಳನ್ನು ಅರ್ಥೈಸಿಕೊಂಡು ಅದರ ಪರಿಹಾರಕ್ಕಾಗಿ ನಿರಂತರವಾಗಿ ಶ್ರಮಿಸುತ್ತಾ ಬಂದಿದೆ. ಪ್ರಾಥಮಿಕ ಶಿಕ್ಷಣದಲ್ಲಿ ಶಿಕ್ಷಕಿಯರು ಹೆಚ್ಚಿನ ಪ್ರಮಾಣದಲ್ಲಿ ತೊಡಗಿಸಿ ಕೊಂಡು ಮಾತೃ ಹೃದಯದ ಪ್ರೀತಿಯನ್ನು ನೀಡುವಲ್ಲಿ ಯಶಸ್ವಿಯಾಗುತ್ತಾ ಬಂದಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಹೇಶ್ವರಿ ಮತ್ತು ಅವರ ತಂಡ ಸಮಸ್ತ ಶಿಕ್ಷಕರ ನೋವು ನಲಿವುಗಳಿಗೆ ಸ್ಪಂದಿಸಿ ಶಿಕ್ಷಕ ಸ್ನೇಹಿಯಾಗಿ ಬೆಳೆಯಲಿ ಎಂದು ಮಾಜಿ ಸಚಿವ ಅಭಯ ಚಂದ್ರ ಜೈನ್ ಹೇಳಿದರು. 

ಅವರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಸಮಾಜ ಮಂದಿರದಲ್ಲಿ ಶನಿವಾರ ಸಂಜೆ ಉದ್ಘಾಟಿಸಿ ಮಾತನಾಡಿದರು. 
ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕೆ. ಪಿ.ಸುಚರಿತ ಶೆಟ್ಟಿ ಮಾತನಾಡಿ ಶಿಕ್ಷಕರ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಸಂಘದ ಪದಾಧಿಕಾರಿಗಳಿಗೆ ಸಲಹೆ ನೀಡಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಮಲ್ ನೆಲ್ಯಾಡಿ ಅವರನ್ನು ಸನ್ಮಾನಿಸಲಾಯಿತು.
 ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿರುವ ಪ್ರಫುಲ ಎಮ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.

ಜಿಲ್ಲಾ ಸಹ ಕಾರ್ಯದರ್ಶಿ ಸಂದೇಶ್, ಮೂಡುಬಿದಿರೆ ಶಿಕ್ಷಣ ಸಂಯೋಜಕರಾದ ರಾಜೇಶ್ ಭಟ್, ತಾಲೂಕು ಸರಕಾರಿ ನೌಕರ ಸಂಘದ ಅಧ್ಯಕ್ಷ ಡಾ. ದೊರೆಸ್ವಾಮಿ, ಪ್ರೌಢಶಾಲಾ ಸಹ ಶಿಕ್ಷಕ ಸಂಘದ ತಾಲೂಕು ಅಧ್ಯಕ್ಷ 
ಡಾ. ರಾಮಕೃಷ್ಣ ಶಿರೂರು, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಶಿಕಾಂತ ವೈ, ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಅಧ್ಯಕ್ಷೆ ನಾಗರತ್ನ ಶಿರೂರು, ಎನ್‌ಪಿಎಸ್ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ ಕೊಳವಳ್ಳಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿನ್ನಿ ಫ್ರೆಡ್ ಪಿಂಟೋ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟ ಪೂರ್ವ ಅಧ್ಯಕ್ಷ ಸುಧಾಕರ ಸಾಲ್ಯಾನ್, ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಕಾರ್ಯದರ್ಶಿ ನಿತೇಶ್ ಬಲ್ಲಾಳ್, ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಬಾಲಕೃಷ್ಣ ರೇಖ್ಯ, ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಪದಾಧಿಕಾರಿಗಳಾದ ಶ್ರೀ ಮಹದೇವ, ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ಉಪಾಧ್ಯಕ್ಷ ಧರಣೇಂದ್ರ ಜೈನ್ ಉಪಸ್ಥಿತರಿದ್ದರು.
 
ತಾಲೂಕು ಅಧ್ಯಕ್ಷರಾದ ಮಹೇಶ್ವರಿ ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ನಾಗರತ್ನ ಶಿರೂರು ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಉಪಾಧ್ಯಕ್ಷ ಸುಧಾಕರ್ ವಂದಿಸಿದರು.

Post a Comment

0 Comments