ಇರುವೈಲಿನಲ್ಲಿಬೃಹತ್ ರಕ್ತದಾನ ಶಿಬಿರ

ಇರುವೈಲಿನಲ್ಲಿಬೃಹತ್ ರಕ್ತದಾನ ಶಿಬಿರ
 

ಮೂಡುಬಿದಿರೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಇರುವೈಲು ಹಾಗೂ ಲೇಡಿಗೋಷನ್ ಆಸ್ಪತ್ರೆ, ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಭಾನುವಾರ ಇರುವೈಲು ಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರ  ನಡೆಯಿತು.

ಇರುವೈಲು ಭಜನಾ ಮಂಡಳಿಯ ಅಧ್ಯಕ್ಷ ಬಾಲಚಂದ್ರ ಶೆಟ್ಟಿ ಅವರು ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. 

ಸಮಿತಿಯ ಅಧ್ಯಕ್ಷ ಸೋಮಶೇಖರ್ ಕೋಟ್ಯಾನ್, ಗೌರವಾಧ್ಯಕ್ಷ ಪ್ರಶಾಂತ್ ಆಚಾರ್ಯ, ಕೋಶಾಧಿಕಾರಿ ಪವನ್ ಶೆಟ್ಟಿ, ಸ್ಥಾಪಕ ಸದಸ್ಯರಾದ ಸತೀಶ್ ತಂಗಿಲ, ನವೀನ್ ಪೂಜಾರಿ ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದ್ದು  ಒಟ್ಟು 80 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

Post a Comment

0 Comments

Advertisement