ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅಲಂಗಾರಿನಲ್ಲಿ ಸಮಗ್ರ ಆರೋಗ್ಯ ಅಭಿಯಾನ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅಲಂಗಾರಿನಲ್ಲಿ ಸಮಗ್ರ ಆರೋಗ್ಯ ಅಭಿಯಾನ
 
ಮೂಡುಬಿದಿರೆ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ದಕ್ಷಿಣ ಕನ್ನಡ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಐ.ಸಿ.ಟಿ.ಸಿ. ವಿಭಾಗ ಮೂಡುಬಿದಿರೆ ಮತ್ತು ಲಯನ್ಸ್ ಕ್ಲಬ್ ಅಲಂಗಾರು ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಭಾನುವಾರ ಅಲಂಗಾರು ಸೈಂಟ್ ಥೋಮಸ್ ಶಾಲಾ ಆವರಣದಲ್ಲಿ ಸಮಗ್ರ ಆರೋಗ್ಯ ಅಭಿಯಾನ ನಡೆಯಿತು.

ಲಯನ್ಸ್ ಕ್ಲಬ್ ಅಧ್ಯಕ್ಷ ರೋಕಿ ಮಸ್ಕರೇನಸ್ ಅವರು ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಂಕ್ರಾಮಿಕ ರೋಗಗಳನ್ನು ಪ್ರಾಥಮಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡಬೇಕು. ಕಾಯಿಲೆ ಬರುವ ಮುನ್ನ ಮುನ್ನೆಚ್ಚರಿಕೆ ವಹಿಸುವುದು ಹಾಗೂ ರೋಗದ ಗುಣಲಕ್ಷಣಗಳು ಕಂಡುಬಂದರೆ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಸಕಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಹೇಳಿದರು.

ಕಾರ್ಯದರ್ಶಿ ಜೇಸಿಂತ ಡೆಮೇಲ್ಲೋ, ಹೆರಾಲ್ಡ್ ತಾವ್ರೋ, ರಾಜೇಶ್ ಕಡಲಕೆರೆ ,ವೈದ್ಯಾಧಿಕಾರಿ ಡಾ. ಹಾದಿಯಾ, ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಖಾದರ್ ನದಾಫ್, ಲ್ಯಾಬ್ ಟೆಕ್ನಾಲಜಿಸ್ಟ್ ಜಗದೀಶ್, ಸಿ.ಎಚ್.ಒ., ಪಿ.ಎಚ್.ಸಿ.ಒ. ಹಾಗೂ ಲಯನ್ಸ್ ಕ್ಲಬ್ ಸದಸ್ಯರು ಭಾಗವಹಿಸಿದರು.

ಅಭಿಯಾನದಲ್ಲಿ ಸಾರ್ವಜನಿಕರಿಗೆ ವಿವಿಧ ಆರೋಗ್ಯ ಸೇವೆಗಳನ್ನು ಉಚಿತವಾಗಿ ಒದಗಿಸಲಾಯಿತು. ಶಿಬಿರದಲ್ಲಿ ಎಕ್ಸ್-ರೇ ಪರೀಕ್ಷೆ, ಕಫ ಪರೀಕ್ಷೆ, ಹಿಮೋಗ್ಲೋಬಿನ್ ರಕ್ತ ಪರೀಕ್ಷೆ, ಮಧುಮೇಹ ಪರೀಕ್ಷೆ, ಸಿಫಿಲಿಸ್ ಟೆಸ್ಟ್, ಬಿ.ಪಿ. ಪರೀಕ್ಷೆ ಹಾಗೂ ಸಮುದಾಯ ಆಧಾರಿತ ಐ.ಸಿ.ಟಿ.ಸಿ. ತಪಾಸಣೆ ಸೌಲಭ್ಯ ನೀಡಲಾಯಿತು.

ಶಿಬಿರದಲ್ಲಿ ಒಟ್ಟು 120 ಮಂದಿಯನ್ನು ತಪಾಸಣೆ ಮಾಡಲಾಯಿತು. ಸ್ಥಳೀಯ ಸಾರ್ವಜನಿಕರು ಪಾಲ್ಗೊಂಡು ಆರೋಗ್ಯ ತಪಾಸಣೆಯ ಪ್ರಯೋಜನ ಪಡೆದುಕೊಂಡರು.

Post a Comment

0 Comments

Advertisement