ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ.

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ.              

ಮೂಡುಬಿದಿರೆ : ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನಲ್ಲಿ ಇಂದು ಮಧ್ಯಾಹ್ನ 12:15ರ ಸುಮಾರಿಗೆ ಭಾರೀ ಸ್ಫೋಟ ಸಂಭವಿಸಿದ್ದು, ಪರಿಸರವಾಸಿಗಳು ಬೆಚ್ಚಿ ಬಿದ್ದಿದ್ದಾರೆ.
ಎಂಆರ್‌ಪಿಎಲ್‌ನ 3ನೇ ಹಂತದ ಸಿಎಸ್‌ಟಿ ಪ್ಲಾಂಟ್‌ನಲ್ಲಿ ಈ ಸ್ಫೋಟ ಉಂಟಾಗಿದೆ. ಸ್ಫೋಟದ ಬೆನ್ನಲ್ಲೇ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಆಕಾಶದೆತ್ತರಕ್ಕೆ ಹೊಗೆ ಆವರಿಸಿದೆ. ಸ್ಫೋಟದ ಶಬ್ದದಿಂದಾಗಿ ಜೋಕಟ್ಟೆ ಪಂಚಾಯತ್ ಕಟ್ಟಡ ಸಹಿತ ಸುತ್ತಮುತ್ತಲಿನ ಹಲವಾರು ಮನೆಗಳು ಕಂಪಸಿವೆ. 

ಸ್ಫೋಟದ ತೀವ್ರತೆಗೆ ಎಂಆರ್ ಪಿಎಲ್ ಸುತ್ತಮುತ್ತಲಿನ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಹಲವು ಮನೆಗಳ ಬಾಗಿಲು, ಕಿಟಕಿಗಳ ಗಾಜುಗಳಿಗೆ ಹಾನಿ ಸಂಭವಿಸಿದೆ. ಮಂಗಳೂರು ಲೇಡಿ ಹಿಲ್ ತನಕವೂ ಸ್ಫೋಟದ ಶಬ್ದ ಕೇಳಿಸಿದೆ.

ಅವಘಡಕ್ಕೆ ಕಾರಣ ಏನೆಂದು ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ನವ ಮಂಗಳೂರು ಬಂದರು, ಕದ್ರಿ, ಪಾಂಡೇಶ್ವರದ ಅಗ್ನಿಶಾಮಕ ವಾಹನಗಳು ಧಾವಿಸಿವೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Post a Comment

0 Comments

Advertisement