ಗಮಕ ಕಲಾ ಪರಿಷತ್ ನ ಮೂಡುಬಿದಿರೆ ತಾಲೂಕು ಘಟಕದ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

ಗಮಕ ಕಲಾ ಪರಿಷತ್ ನ ಮೂಡುಬಿದಿರೆ ತಾಲೂಕು ಘಟಕದ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ

ಮೂಡುಬಿದಿರೆ :ಸಾಹಿತ್ಯವನ್ನು ಭಾವಪೂರ್ಣವಾಗಿ ಗಾಯನದ ಮೂಲಕ ಪ್ರಸ್ತುತಪಡಿಸುವ ಗಮಕ ಕಲೆಯನ್ನು ವಿದ್ಯಾ ಸಂಸ್ಥೆಗಳು, ದೇವಸ್ಥಾನಗಳು ಬೆಳೆಸಬೇಕಾದುದು ಅವಶ್ಯ
ಎಂದು ಹಿರಿಯ ಗಮಕಿ, ಕರ್ನಾಟಕ ರಾಜ್ಯಗಮಕ ಕಲಾ ಪರಿಷತ್ ದ.ಕ. ಜಿಲ್ಲಾಧ್ಯಕ್ಷ ಪ್ರೊ| ಮಧೂರು ಮೋಹನ ಕಲ್ಲೂರಾಯ ಅವರು ಅಭಿಪ್ರಾಯಪಟ್ಟರು.

ಅವರು ಮೂಡುಬಿದಿರೆ ಅಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಗಮಕ ಕಲಾ ಪರಿಷತ್ ನ ಮೂಡುಬಿದಿರೆ ತಾಲೂಕು ಘಟಕದ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿ  ಮಾತನಾಡಿದರು.

ಘಟಕದ ಗೌರವಾಧ್ಯಕ್ಷ ಕೆ.ಶ್ರೀಪತಿ ಭಟ್ ನೂತನ ಘಟಕವನ್ನು ಉದ್ಧಾಟಿಸಿ ಶುಭ ಹಾರೈಸಿದರು.
ಅಲಂಗಾರು ಸುಬ್ರಹ್ಮಣ್ಯ ಭಟ್ ಅವರು ಶುಭಾಶಂಸನೆಗೈದು ನೂತನ ಘಟಕಕ್ಕೆ ಶುಭ ಹಾರೈಸಿದರು.
ಪರಿಷತ್ತಿನ ಮೂಡುಬಿದಿರೆ ತಾಲೂಕು ಘಟಕದ ನೂತನ ಅಧ್ಯಕ್ಷ ಗಮಕಿ ಡಾ. ಸುಬ್ರಹ್ಮಣ್ಯ ಪದ್ಯಾಣ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಘಟಕದ ಮುಂದಿನ ಯೋಜನೆಗಳನ್ನು ವಿವರಿಸಿದರು. ವೆಂಕಟ್ರಮಣ ಕೆರೆಗದ್ದೆ ನಿರೂಪಿಸಿದ ಕಾರ್ಯಕ್ರಮದಲ್ಲಿ 
ನೂತನ ಕಾರ್ಯದರ್ಶಿ ಬಾಲಕೃಷ್ಣ ಭಟ್ ತಮ್ಮ ಅನಿಸಿಕೆಗಳೊಂದಿಗೆ ಸರ್ವರಿಗೂ ಧನ್ಯವಾದ ಸಮರ್ಪಿಸಿದರು.
ಉದ್ಘಾಟನಾ ಸಮಾರಂಭದ ಅಂಗವಾಗಿ ಕರ್ಣಭೇದನ ಕಾವ್ಯದ ವಾಚನ-ಪ್ರವಚನ ಕಾರ್ಯಕ್ರಮ ನಡೆಸಲಾಯಿತು.

Post a Comment

0 Comments

Advertisement