ನಿಡ್ಡೋಡಿ ಶ್ರೀ ದುರ್ಗಾದೇವಿ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮುದ್ದು ಕೃಷ್ಣ ವೇಷ ಸ್ಪರ್ಧೆ

ನಿಡ್ಡೋಡಿ ಶ್ರೀ ದುರ್ಗಾದೇವಿ ವಿದ್ಯಾಸಂಸ್ಥೆಯಲ್ಲಿ  ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮುದ್ದು ಕೃಷ್ಣ ವೇಷ ಸ್ಪರ್ಧೆ

​ಮೂಡುಬಿದಿರೆ :
ಜ್ಞಾನರತ್ನ ಎಜ್ಯುಕೇಶನ್ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಆಡಳಿತಕ್ಕೊಳಪಟ್ಟ ಶ್ರೀ ದುರ್ಗಾದೇವಿ ವಿದ್ಯಾಸಂಸ್ಥೆಯ ಆವರಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಅತ್ಯಂತ ಶ್ರದ್ಧಾ-ಭಕ್ತಿ ಹಾಗೂ ಸಂಭ್ರಮೋಲ್ಲಾಸಗಳಿಂದ ಆಚರಿಸಲಾಯಿತು.

​ಹಬ್ಬದ ಪ್ರಯುಕ್ತ ಪುಟಾಣಿ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಆಕರ್ಷಕ  'ಮುದ್ದು ಕೃಷ್ಣ ವೇಷ ಸ್ಪರ್ಧೆ'ಯನ್ನು ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ (Academic Advisor)  ಮಲ್ಲಿಕಾ ಹರೀಶ್ ಅವರು ಜ್ಯೋತಿ ಬೆಳಗಿಸುವ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸಿ, ಮಕ್ಕಳಿಗೆ ಶುಭ ಹಾರೈಸಿದರು.

​ ಎಸ್.ಡಿ.ಎಂ.ಸಿ ಅಧ್ಯಕ್ಷರಾದ  ಪಾವನಾ ಹಾಗೂ ಸಂಸ್ಥೆಯ ಆಡಳಿತಾಧಿಕಾರಿ  ಸಾಗರ್ ಗೌರವಾನ್ವಿತ ಉಪಸ್ಥಿತರಿದ್ದರು.

​ಸ್ಪರ್ಧೆಯಲ್ಲಿ ಕಣ್ಮನ ಸೆಳೆಯುವಂತೆ ಬಾಲಕೃಷ್ಣ ವೇಷ ಧರಿಸಿ ಮಿಂಚಿದ ಪುಟ್ಟ ಕಂದಮ್ಮಗಳಿಗೆ ಬಹುಮಾನಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಮನಸೂರೆಗೊಳ್ಳುವ ಸಾಂಸ್ಕೃತಿಕ ವೈಭವ ಅನಾವರಣಗೊಂಡು, ಗೋಕುಲಾಷ್ಟಮಿಯ ಕಳೆಗಟ್ಟಿದ ಸಂಭ್ರಮಕ್ಕೆ ಸಾಕ್ಷಿಯಾಯಿತು.

​ಸಹ ಮುಖ್ಯೋಪಾಧ್ಯಾಯಿನಿ ಜಯಶ್ರೀ ಅವರು ಕಾರ್ಯಕ್ರಮವನ್ನು  ನಿರೂಪಿಸಿದರು.

Post a Comment

0 Comments

Advertisement