ಅ. 9-10 ರಂದು ಮೂಡುಬಿದಿರೆ ಯಲ್ಲಿ ಮಂಗಳೂರು ಉತ್ತರ ವಲಯ ಮಟ್ಟದ ಶಾಲಾ ಕ್ರೀಡಾಕೂಟ
ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ (ಉಪನಿರ್ದೇಶಕರ ಕಚೇರಿ, ಮಂಗಳೂರು), ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ (ಮಂಗಳೂರು ಉತ್ತರ ವಲಯ) ಹಾಗೂ ಕಿನ್ನಿಗೋಳಿಯ ರೋಟರಿ ಆಂಗ್ಲ ಮಾಧ್ಯಮ ಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ 2026-2027ನೇ ಸಾಲಿನ ಮಂಗಳೂರು ಉತ್ತರ ವಲಯ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಅ.9 ಮತ್ತು 10ರಂದು ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ಜರಗಲಿದೆ.
ಉದ್ಘಾಟನಾ ಸಮಾರಂಭ:
ಅಕ್ಟೋಬರ್ 9 ರಂದು ಬೆಳಿಗ್ಗೆ 9:30 ಕ್ಕೆ ಕ್ರೀಡಾಕೂಟ ಉದ್ಘಾಟನೆಗೊಳ್ಳಲಿದ್ದು, ಶ್ರೀ ಕ್ಷೇತ್ರ ಕಟೀಲಿನ ಆನುವಂಶಿಕ ಅರ್ಚಕರಾದ ವಾಸುದೇವ ಅಸ್ರಣ್ಣ ಅವರು ಆಶೀರ್ವಚನ ನೀಡಲಿದ್ದಾರೆ. ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶಿಕ್ಷಣ ಇಲಾಖೆಯ ಪ್ರಮುಖ ಅಧಿಕಾರಿಗಳು, ರೋಟರಿ ಕ್ಲಬ್‌ನ ಪದಾಧಿಕಾರಿಗಳು ಹಾಗೂ ಸ್ಥಳೀಯ ಗಣ್ಯರು ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭ:
ಅ. 10 ರಂದು ಸಂಜೆ ಕ್ರೀಡಾಕೂಟದ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭವು ಜರುಗಲಿದೆ. ಮಾಜಿ ಶಾಸಕ ಕೆ. ಅಭಯಚಂದ್ರ ಜೈನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ರೋಟರಿ ಸಂಸ್ಥೆಯ ಪದಾಧಿಕಾರಿಗಳು
ಮಂಗಳೂರು ಉತ್ತರ ವಲಯದ ವಿವಿಧ ಶಾಲೆಗಳಿಂದ ನೂರಾರು ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸಲಿದ್ದಾರೆ.

0 Comments