ಮೂಡುಬಿದಿರೆ : ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ 'ವೇಯ್ಟ್ ಲಿಫ್ಟಿಂಗ್' ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ :  ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ 'ವೇಯ್ಟ್ ಲಿಫ್ಟಿಂಗ್' ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪುರುಷ ಮತ್ತು ಮಹಿಳೆಯರ ವಿಭಾಗದ ಭಾರ ಎತ್ತುವ ಸ್ಪರ್ಧೆಯು ಶನಿವಾರ ಆರಂಭಗೊಂಡಿತು. 

ಎರಡು ದಿನ ನಡೆಯುವ 
ಸ್ಪರ್ಧೆಯನ್ನು  ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಅವರು ಉದ್ಘಾಟಿಸಿ  ಮಾತನಾಡಿ, ವಿದ್ಯಾರ್ಥಿಗಳು ಸಿಗುವ ಕ್ರೀಡಾ ಅವಕಾಶಗಳನ್ನು ಉತ್ತಮವಾಗಿ ಉಪಯೋಗಿಸಿಕೊಂಡು, ಕ್ರೀಡಾ ರಂಗದಲ್ಲಿ ತಮ್ಮನ್ನು ತಾವು ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಕ್ರೀಡಾಪಟುಗಳಿಗೆ ಸ್ಫೂರ್ತಿ ತುಂಬಿದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಬಾರ್‌ಬೆಲ್ ಚಲನೆಯನ್ನು ಕರ್ನಾಟಕ ಸರ್ಕಾರದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ನಡೆಸಿ ಕ್ರೀಡೆಗೆ ಚಾಲನೆ ನೀಡಿದರು. ಮೂಡುಬಿದಿರೆ ದಿಗಂಬರ ಜೈನ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ  ಅಭಿಜಿತ್ ಎಂ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

 ಸನ್ಮಾನ: ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಶಾಂತಿರಾಜ ಕಂಬಳಿ ಮತ್ತು ಪ್ರಾಂಶುಪಾಲರಾದ ಪಾರ್ಶ್ವನಾಥ ಅಜ್ರಿ ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಕಾಮನ್‌ವೆಲ್ತ್ ಭಾರ ಎತ್ತುವ ಸ್ಪರ್ಧೆಯ ಚಿನ್ನದ ಪದಕ ವಿಜೇತ ಕ್ರೀಡಾಪಟು  ಪುಷ್ಪರಾಜ್ ಹೆಗ್ಡೆ, ಮಂಗಳೂರು ವಿವಿ ದೈಹಿಕ ಶಿಕ್ಷಣ ನಿರ್ದೇಶಕರಾದ ಜೆರಾಲ್ಡ್ ಸಂತೋಷ್ ಡಿಸೋಜ,  ಉದ್ಯಮಿಗಳಾದ ಪವನ್ ಬಿ. ಕೋಟ್ಯಾನ್, ಪೃಥ್ವಿರಾಜ್ ಶೆಟ್ಟಿ ಹಾಗೂ  ಎವರೇಸ್ಟ್ ರೋಡ್ರಿಗಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

  ಪ್ರಾಂಶುಪಾಲ ಪಾರ್ಶ್ವನಾಥ ಅಜ್ರಿ ಅವರು  ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಮಲ್ಲಿಕಾ ರಾವ್  ಕಾಯ೯ಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ನಿತಿನ್‌ರಾಜ್ ವಂದಿಸಿದರು.

Post a Comment

0 Comments

Advertisement