*ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಡಾ. ಜಿ. ಶಂಕರ್ ಮಹಿಳಾ ಕಾಲೇಜಿಗೆ ದ್ವಿತೀಯ ಸ್ಥಾನ*

*ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಡಾ. ಜಿ. ಶಂಕರ್ ಮಹಿಳಾ ಕಾಲೇಜಿಗೆ ದ್ವಿತೀಯ ಸ್ಥಾನ*

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯದ 2026–27ನೇ ಸಾಲಿನ ಅಂತರ್ ಕಾಲೇಜು ಮಹಿಳಾ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ತಂಡ ದ್ವಿತೀಯ ಸ್ಥಾನ ಗಳಿಸಿದೆ.

ಕಾಲೇಜಿನ ರಕ್ಷಿತಾ, ತುಷಾರಾ, ಶಾಲಿಕಾ ಮತ್ತು ಸಮೃದ್ಧಿ ತಂಡವನ್ನು ಪ್ರತಿನಿಧಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಯತೀಶ್ ಕುಮಾರ್ ತಂಡದ ತರಬೇತುದಾರರಾಗಿ ಮಾರ್ಗದರ್ಶನ ನೀಡಿದರು.

ಮಂಗಳೂರಿನ ರೋಶನಿ ನಿಲಯದ ಸಮಾಜಕಾರ್ಯ ಅಧ್ಯಯನ ಸಂಸ್ಥೆ ಆಯೋಜಿಸಿದ್ದ ಪಂದ್ಯಾವಳಿಯಲ್ಲಿ ಉಡುಪಿಯ ಎಂಜಿಎಂ ಸಂಜೆ ಕಾಲೇಜು ಪ್ರಥಮ ಸ್ಥಾನ ಪಡೆದರೆ, ಉಡುಪಿಯ ಶ್ರೀ ಪೂರ್ಣಪ್ರಜ್ಞ ಸಂಜೆ ಕಾಲೇಜು ತೃತೀಯ ಸ್ಥಾನ ಗಳಿಸಿತು.

ಕಾಲೇಜಿನ ಪ್ರಾಂಶುಪಾಲೆ ಪ್ರೊ. ನಿಕೇತನ ಅವರು ತಂಡದ ಸಾಧನೆಯನ್ನು ಅಭಿನಂದಿಸಿ, ವಿದ್ಯಾರ್ಥಿನಿಯರು ಹಾಗೂ ತರಬೇತುದಾರರ ಪ್ರಯತ್ನವನ್ನು ಶ್ಲಾಘಿಸಿದರು.

Post a Comment

0 Comments

Advertisement