ಮೂಡುಬಿದಿರೆ: ರಾಜ್ಯ ಸರಕಾರವು ಗ್ರಾಮ ಪಂಚಾಯತ್ ಗಳಿಗೆ ಹಾಗೂ ಸ್ಥಳೀಯ ಆಡಳಿತ ವ್ಯವಸ್ಥೆಗೆ ಅಗತ್ಯ ಸೌಲಭ್ಯ ಮತ್ತು ಅನುದಾನ ಒದಗಿಸದೆ ಜನಸಾಮಾನ್ಯರನ್ನು ಅಲೆದಾಡುವಂತೆ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿಯಿಂದ ಮಂಗಳವಾರ ದರೆಗುಡ್ಡೆಯಲ್ಲಿ ಪ್ರತಿಭಟನೆ ನಡೆಯಿತು.
ಗ್ರಾಮ ಪಂಚಾಯತ್ ಗಳಿಗೆ ತಡೆಹಿಡಿಯಲಾಗಿರುವ ಅನುದಾನ ಬಿಡುಗಡೆಗೊಳಿಸುವುದು, ಖಾಲಿ ಹುದ್ದೆಗಳಿಗೆ ಸಿಬ್ಬಂದಿ ನೇಮಕ ಮಾಡುವುದು ಹಾಗೂ ವಿಳಂಬವಾಗಿರುವ ಪಂಚಾಯತ್ ಚುನಾವಣೆಗಳನ್ನು ನಡೆಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಪ್ರತಿಭಟನಾಕಾರರು ಮುಂದಿಟ್ಟರು. ವಿ.ವಿ.ಜಿ. ರಾಮ್ ಜಿ ಮತ್ತು 16ನೇ ಹಣಕಾಸು ಆಯೋಗದ ಅನುದಾನ ಬಿಡುಗಡೆಗೆ ಸಂಬಂಧಿಸಿದ ಅರ್ಜಿಗಳನ್ನು ವಿಲೇವಾರಿಗೊಳಿಸುವಂತೆಯೂ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುನಿಲ್ ಆಳ್ವ, ಎಸ್ಸಿ ಮೋರ್ಚಾದ ಜಿಲ್ಲಾ ಅಧ್ಯಕ್ಷ ಜಗನ್ನಾಥ ಕಾನ, ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಪ್ರಧಾನ ಕಾಯ೯ದಶಿ೯ ರಂಜಿತ್ ಪೂಜಾರಿ, ಪ್ರತಿಭಟನೆಯ ಪ್ರಮುಖ್ ಈಶ್ವರ್ ಕಟೀಲ್, ಭರತ್ ಶೆಟ್ಟಿ ಹಾಗೂ ಒಬಿಸಿ ಮೋಚಾ೯ದ ಅಧ್ಯಕ್ಷ ಪ್ರದೀಪ್ ಕುಮಾರ್ ವಾಲ್ಪಾಡಿ, ಪಂಚಾಯತ್ ಮಾಜಿ ಉಪಾಧ್ಯಕ್ಷ ಮುನಿರಾಜ್ ಹೆಗ್ಡೆ, ಸದಸ್ಯರಾದ ದೀಕ್ಷಿತ್ ಪಣಪಿಲ, ಪ್ರಮುಖರಾದ ಅಶ್ವಥ್ ಪಣಪಿಲ, ಶಕ್ತಿಿ ಕೇಂದ್ರ ಪ್ರಮುಖ ಸುಧಾಕರ ಡಿ ಪೂಜಾರಿ, ಸಚಿನ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.
ಮುಂದಿನ ದಿನಗಳಲ್ಲಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳನ್ನು ಮುಂದುವರಿಸುವುದಾಗಿ ಬಿಜೆಪಿ ಮುಖಂಡರು ತಿಳಿಸಿದರು. ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ನವೆಂಬರ್ 6ರಂದು ಮಂಗಳೂರಿನಲ್ಲಿ ಜಿಲ್ಲಾ ಮಟ್ಟದ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ತಿಳಿಸಿದರು.

0 Comments