ಆಳ್ವಾಸ್ ಕಾನೂನು ಕಾಲೇಜಿನ ಪ್ರಾಂಶುಪಾಲೆ ರಶ್ಮಿ ಶೆಟ್ಟಿಗೆ ಪಿಎಚ್.ಡಿ.
ಮೂಡುಬಿದಿರೆ: ಆಳ್ವಾಸ್ ಕಾನೂನು ಕಾಲೇಜಿನ ಪ್ರಾಂಶುಪಾಲೆ ರಶ್ಮಿ ಶೆಟ್ಟಿ ಭಾರತೀಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಬೆಂಗಳೂರಿನಲ್ಲಿ ನಡೆದ ಘಟಿಕೋತ್ಸವದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಪದವಿ ಪ್ರದಾನ ಮಾಡಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಿರಿಯ ರಂಗಭೂಮಿ ಕಲಾವಿದೆ ಅರುಂಧತಿ ನಾಗ್ ಉಪಸ್ಥಿತರಿದ್ದರು.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ–2013ರ ಅನುಷ್ಠಾನ ಹಾಗೂ ರಾಮನಗರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಮುಸ್ಲಿಂ ಸಮುದಾಯಗಳ ಅನುಭವಗಳ ಕುರಿತು ರಶ್ಮಿ ಶೆಟ್ಟಿ ಸಂಶೋಧನೆ ನಡೆಸಿದ್ದಾರೆ. ಪ್ರೊ. ಸರಸು ಎಸ್ತರ್ ಥಾಮಸ್ ಮಾರ್ಗದರ್ಶನದಲ್ಲಿ ಸಂಶೋಧನೆ ಪೂರ್ಣಗೊಳಿಸಿದ್ದಾರೆ. ಎರಡು ದಶಕಗಳಿಗೂ ಅಧಿಕ ಶೈಕ್ಷಣಿಕ ಅನುಭವ ಹೊಂದಿರುವ ಅವರು ‘ಸಾಮಾಜಿಕ ನ್ಯಾಯ ಮತ್ತು ಕಾರ್ಮಿಕ ನ್ಯಾಯಶಾಸ್ತ್ರ’ ಕೃತಿಯ ಲೇಖಕಿಯಾಗಿದ್ದು, ಸೇಜ್ ಪ್ರಕಾಶನ ಅದನ್ನು ಪ್ರಕಟಿಸಿದೆ. ಅವರು ಸುಗಂಧಿ ಜೆ. ಶೆಟ್ಟಿ ಹಾಗೂ ದಿವಂಗತ ನ್ಯಾಯವಾದಿ ಬೋಳ ಪರ್ತಿಮಾರುಗುತ್ತು ಜಯರಾಮ ಶೆಟ್ಟಿ ಅವರ ಪುತ್ರಿ.

0 Comments