ಶ್ರೀ ಮಹಾವೀರ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ಉಡುಪಿ ವಲಯದ ಅಂತರ್ ಕಾಲೇಜು ಪುರುಷರ ವಿಭಾಗದ ಫುಟ್ಬಾಲ್ ಪಂದ್ಯಾಟ

ಶ್ರೀ ಮಹಾವೀರ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ಉಡುಪಿ ವಲಯದ ಅಂತರ್ ಕಾಲೇಜು ಪುರುಷರ ವಿಭಾಗದ  ಫುಟ್ಬಾಲ್ ಪಂದ್ಯಾಟ 

ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನ
ಸಂಯುಕ್ತ ಆಶ್ರಯದಲ್ಲಿ 2026–27ನೇ ಸಾಲಿನ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಪುರುಷರ ಫುಟ್‌ಬಾಲ್
ಉಡುಪಿ ವಲಯದ ಪಂದ್ಯಾಟವು ಶ್ರೀ ಮಹಾವೀರ ಕಾಲೇಜಿನ ಜಿ.ವಿ. ಪೈ ಮೈದಾನದಲ್ಲಿ ಬುಧವಾರ ನಡೆಯಿತು.

ಮೂಡಬಿದಿರೆ ಭೈರವಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಾಮಚಂದ್ರ ಕೆಂಬಾರೆ ಪಂದ್ಯಾಟವನ್ನು ಉದ್ಘಾಟಿಸಿ, ಮಾತನಾಡಿ 
ವಿಶ್ವದಲ್ಲೇ ಅತ್ಯಂತ ಜನಪ್ರಿಯ ಕ್ರೀಡೆಗಳಲ್ಲಿ ಒಂದಾಗಿರುವ ಫುಟ್ಬಾಲ್ ಪಂದ್ಯವು ಇಂದು ನಮ್ಮ ದೇಶದಲ್ಲಿಯೂ
ಜನಪ್ರಿಯತೆಯನ್ನು ಗಳಿಸುತ್ತಿದೆ. ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳನ್ನು ಆಕರ್ಷಿಸುವ ಈ ಕ್ರೀಡೆಯು ದಿನದಿಂದ ದಿನಕ್ಕೆ ಹೆಚ್ಚಿನ
ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತಿದೆ. ಫುಟ್‌ಬಾಲ್ ಪಂದ್ಯದ ಫಲಿತಾಂಶವು ಕ್ರೀಡಾಪಟುಗಳ ಕೌಶಲ್ಯ, ಸಮಯಪ್ರಜ್ಞೆ,
ತಂಡದ ಒಗ್ಗಟ್ಟು ಹಾಗೂ ಅಚ್ಚುಕಟ್ಟಾದ ಯೋಜನೆಯನ್ನು ಅವಲಂಬಿಸಿರುತ್ತದೆ’ ಎಂದು ತಿಳಿಸಿದರು.
 ಅಧ್ಯಕ್ಷತೆಯನ್ನು ವಹಿಸಿದ ಶ್ರೀ ಮಹಾವೀರ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಕರ್ನಾಟಕ
ಸರ್ಕಾರದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿ, ಎಲ್ಲ ಸ್ಪರ್ಧಾಳುಗಳಿಗೆ ಶುಭ
ಹಾರೈಸಿದರು.
ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿ'ಸೋಜಾ,
ಎಂ.ಕೆ.ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಧನಂಜಯ ಶೆಟ್ಟಿ ಹಾಗೂ ಶ್ರೀ ಮಹಾವೀರ ಕಾಲೇಜಿನ ಹಳೆ
ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗರಾಜ್,  ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಅಕ್ಷಿತ್ ರೈ, ಕ್ರೀಡಾ ವೀಕ್ಷಕ ಡಾ.
ಮಧು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಹರೀಶ್, ಹಾಗೂ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರವೀಣ್ ಭಂಡಾರಿ
ಉಪಸ್ಥಿತರಿದ್ದರು.

ಶ್ರೀ ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಸ್ವಾಗತಿಸಿದರು. ವಿದ್ಯಾಥಿ೯ನಿ ಸಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ವಿಕ್ರೀತ ವಂದಿಸಿದರು.

Post a Comment

0 Comments

Advertisement