ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿ, ಪಂಚಾಯತ್ ಗಳಿಗೆ ಅನುದಾನ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಪುತ್ತಿಗೆ ಶಕ್ತಿ ಕೇಂದ್ರದಿಂದ ಪ್ರತಿಭಟನೆ
ಮೂಡುಬಿದಿರೆ : ರಾಜ್ಯ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಹಾಗೂ ಗ್ರಾಮ ಪಂಚಾಯತ್, ಸ್ಥಳೀಯ ಆಡಳಿತಕ್ಕೆ ಸೌಲಭ್ಯ ,ಅನುದಾನಗಳನ್ನು ನೀಡದೆ ಜನರನ್ನು ಅಲೆದಾಡುವಂತ ಪರಿಸ್ಥಿತಿ ನಿರ್ಮಾಣ ಮಾಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿಯ ಪುತ್ತಿಗೆ ಶಕ್ತಿಕೇಂದ್ರದ ವತಿಯಿಂದ ಶುಕ್ರವಾರ ಪುತ್ತಿಗೆ ಪಂಚಾಯತ್ ಮುಂಭಾಗ ನಡೆದ ಪ್ರತಿಭಟನೆ ನಡೆಸಿ ಸರ್ಕಾರದ ಧೋರಣೆಯನ್ನು ಖಂಡಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುನೀಲ್ ಆಳ್ವ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ, ಶೋಭೇಂದ್ರ ಸಸಿಹಿತ್ಲು, ಉಸ್ತುವಾರಿ ಈಶ್ವರ್ ಕಟೀಲ್, ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ ತೋಡಾರು, ಯುವಮೋರ್ಚಾ ಅಧ್ಯಕ್ಷ ಕುಮಾರ್ ಪ್ರಸಾದ್, ಮಹಾಶಕ್ತಿಕೇಂದ್ರ ಅಧ್ಯಕ್ಷ ನಾಗೇಶ್ ಅಮೀನ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಶೆಟ್ಟಿ, ಪ್ರಮುಖ್ ಉದಯ ಶೆಟ್ಟಿ, ನಾಗರಾಜ ಕರ್ಕೆರಾ, ಶಶಿಧರ್ ಎಸ್. ಅಂಚನ್ ಎನಿಕ್ರಿಪಲ್ಲ, ಕಿಶೋರ್ ಕುಮಾರ್ ಸೇರಿದಂತೆ, ಪಂಚಾಯತ್ ಮಾಜಿ ಜನಪ್ರತಿನಿಧಿಗಳು, ಪಕ್ಷದ ವಿವಿಧ ಪದಾಧಿಕಾರಿಗಳು , ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಮಂಡಲ ಪ್ರಭಾರಿ- ಸಹಪ್ರಭಾರಿಗಳಾದ ಪ್ರಭಾಕರ್ ಕುಲಾಲ್ ಸ್ವಾಗತಿಸಿದರು. ಪುತ್ತಿಗೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಶಶಿಧರ್ ನಾಯಕ್ ವಂದಿಸಿದರು.

0 Comments