ಎಂಸಿಎಸ್ ಸೊಸೈಟಿಯಲ್ಲಿ ನ. 14ರಿಂದ 20ರವರೆಗೆ ಸಹಕಾರ ಸಪ್ತಾಹ ಸಂಭ್ರಮ
ಮೂಡುಬಿದಿರೆ: 111 ವಷ೯ ತುಂಬಿರುವ ಮೂಡುಬಿದಿರೆ ಕೋ-ಆಪರೇಟಿವ್ ಸೊಸೈಟಿ ಲಿ. ವತಿಯಿಂದ 2026ನೇ ಸಾಲಿನ ಸಹಕಾರ ಸಪ್ತಾಹ ಸಂಭ್ರಮವನ್ನು ನವೆಂಬರ್ 14ರಿಂದ 20ರವರೆಗೆ ಆಯೋಜಿಸಲಾಗಿದ್ದು 12ನೇ ವಷ೯ದ ಕಲ್ಪವೃಕ್ಷ ಪ್ರಶಸ್ತಿಯನ್ನು ಉದ್ಯಮಿ ಕೆ. ಜಯವರ್ಮ ಬಲ್ಲಾಳ್ ಅವರಿಗೆ ಪ್ರದಾನ ಮಾಡಲಾಗುವುದೆಂದು ಎಂದು ಸೊಸೈಟಿ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನವೆಂಬರ್ 14ರಂದು ಸಂಜೆ 6.00ಗಂಟೆಗೆ ಸಂಸ್ಥಾಪಕರ ದಿನಾಚರಣೆ ನಡೆಯಲಿದ್ದು ಆರೋಗ್ಯ ಸಚಿವ, ದ. ಕ ಉಸ್ತುವಾರಿ ಯು. ಟಿ. ಖಾದರ್ ಸಹಕಾರ ಸಪ್ತಾಹ ಕಾಯ೯ಕ್ರಮವನ್ನು ಉದ್ಘಾಟಿಸಲಿದ್ದು ಕಾಕ೯ಳ ಜೈನ ಮಠದ ಸ್ವಸ್ತಿಶ್ರೀ ಲಲಿತಕೀತಿ೯ ಭಟ್ಟಾರಕ ಪಟ್ಟಾಚಾಯ೯ವಯ೯ ಮಹಾಸ್ವಾಮೀಜಿ ಆಶೀವ೯ಚನ ನೀಡಲಿದ್ದಾರೆ. ದ. ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಅಧ್ಯಕ್ಷ ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಸಹಕಾರ ಕಲ್ಪವೃಕ್ಷ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ಶಾಸಕ ಉಮಾನಾಥ ಎ. ಕೋಟ್ಯಾನ್ ವಿವಿಧ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ ಅಭಿನಂದನಾ ಭಾಷಣ ಮಾಡಲಿದ್ದಾರೆ.ದ. ಕ. ಸಹಕಾರ ಸಂಘಗಳ ಉಪನಿಬಂಧಕರಾದ ಎಚ್. ಎನ್. ರಮೇಶ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮಗಳು ಪ್ರತಿದಿನ ಸಂಜೆ 6 ಗಂಟೆಗೆ ಮೂಡುಬಿದಿರೆಯ ಕಲ್ಪವೃಕ್ಷ ಸಭಾಭವನದಲ್ಲಿ ನಡೆಯಲಿದ್ದು
ನವೆಂಬರ್ 15ರಂದು ಕೃಷಿ ಮತ್ತು ಸಹಕಾರ, 16ರಂದು ಕಾನೂನು ಮತ್ತು ಸಹಕಾರ, 17ರಂದು ಸಾಹಿತ್ಯ ಮತ್ತು ಸಹಕಾರ, 18ರಂದು ವೈದ್ಯಕೀಯ ಕ್ಷೇತ್ರದಲ್ಲಿ ಸಹಕಾರ, 19ರಂದು ರಾಜಧರ್ಮ ಮತ್ತು ಸಹಕಾರ ಹಾಗೂ ನವೆಂಬರ್ 20ರಂದು ಡಾ. ಎನ್ ಪ್ರಭಾಚಂದ್ರ ಅವರಿಗೆ ಸಮಗ್ರ ಸಾಧಕ ಪ್ರಶಸ್ತಿ ಪ್ರದಾನ ಮತ್ತು ಸಹಕಾರ ಸಪ್ತಾಹ ಸಮಾರೋಪ ಕಾರ್ಯಕ್ರಮ ನಡೆಯಲಿದೆ.
ವಿವಿಧ ದಿನಗಳ ಕಾರ್ಯಕ್ರಮಗಳಲ್ಲಿ ಸಹಕಾರ ಕ್ಷೇತ್ರದ ಚಿಂತಕರು, ಶಿಕ್ಷಣ ತಜ್ಞರು, ವೈದ್ಯರು, ಸಾಹಿತ್ಯಾಸಕ್ತರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ.
ಸಪ್ತಾಹದ ಅಂಗವಾಗಿ ಸಮಾಜ ಸೇವೆ, ಉದ್ಯಮ, ಕ್ರೀಡೆ, ಕಲೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ. ಸಮಾಜ ಸೇವೆ, ಉದ್ಯಮ ಕ್ಷೇತ್ರ, ಕ್ರೀಡಾ ಕ್ಷೇತ್ರ, ಶ್ರೇಷ್ಠ ಕ್ರೀಡಾ ಸಾಧನೆ ಹಾಗೂ ಹೈನುಗಾರಿಕೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸಲಾಗುತ್ತದೆ.
ಇದಲ್ಲದೆ, ಮೂಡುಬಿದಿರೆಯ ವಿವಿಧ ಸಂಘ-ಸಂಸ್ಥೆಗಳಿಗೆ ಸಹಕಾರ ಸಪ್ತಾಹದ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಸಹಕಾರ ಚಿಂತನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ನವೆಂಬರ್ 20ರಂದು ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ಮೂಡುಬಿದಿರೆ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಹಾಗೂ ಸರ್ವಸದಸ್ಯರು ಕಾರ್ಯಕ್ರಮದ ಆಯೋಜನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಾಹುಬಲಿ ಪ್ರಸಾದ್ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಎಂ.ಗಣೇಶ್ ನಾಯಕ್, ವಿಶೇಷ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಎಂ., ಮುಖ್ಯ ನಿರ್ವಹಣಾಧಿಕಾರಿ ಸುದರ್ಶನ್ ಭಟ್, ನಿರ್ದೇಶಕರಾದ ಕೆ. ಅಭಯಚಂದ್ರ ಜೈನ್, ಮನೋಜ್ ಕುಮಾರ್ ಶೆಟ್ಟಿ, ಎಂ. ಪದ್ಮನಾಭ, ಸಿ. ಎಚ್ ಗಫೂರ್, ಜಯರಾಮ್ ಕೋಟ್ಯಾನ್, ಎಂ. ಪಿ ಅಶೋಕ್ ಕಾಮತ್, ಅನಿತಾ ಶೆಟ್ಟಿ ಉಪಸ್ಥಿತರಿದ್ದರು.

0 Comments