ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಮೂಡುಬಿದಿರೆ : ಹರಿದು ಹಂಚಿ ಹೋಗಿದ್ದ ರಾಜ್ಯವನ್ನು ಒಟ್ಟುಗೂಡಿಸಿದ ದಿನದ ಸಂಭ್ರಮಕ್ಕಾಗಿ ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಕನ್ನಡ ಭಾಷೆಯು ಕೇವಲ ಭಾಷೆಯಲ್ಲ ಅದು ಬದುಕಿನ ಭಾವನೆ, ಸಂಸ್ಕೃತಿಯ ಪ್ರತಿಬಿಂಬ, ಇತಿಹಾಸದ ಹೆಜ್ಜೆ ಗುರುತು ಹಾಗೂ ನಮ್ಮ ಅಸ್ಮಿತೆಯಾಗಿದೆ ಎಂದು ತಾಲೂಕು ತಹಸೀಲ್ದಾರ್ ಪುಟ್ಟರಾಜು ಡಿ. ಎ ಹೇಳಿದರು.
ಅವರು ಮೂಡುಬಿದಿರೆ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ತಾಲೂಕು ಆಡಳಿ ಸೌಧದ ಮುಂಭಾಗದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾಯ೯ಕ್ರಮದ ಅಧ್ಯಕ್ಷತೆ ವಹಿಸಿ ಧ್ವಜವನ್ನರಳಿಸಿ, ಮಾತನಾಡಿದರು.ನಮ್ಮ ನಾಡಿದ ಹಲವಾರು ಮಹಾನ್ ಸಾಹಿತಿಗಳು ಶ್ರೀಮಂತಗೊಳಿಸಿರುವ ಈ ಭಾಷೆಯು 8 ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಿರುವುದು ಭಾರತದ ಸಾಹಿತ್ಯ ಲೋಕಕ್ಕೆ ವಿಶಿಷ್ಠ ಹೆಸರನ್ನು ನೀಡಿದೆ ಎಂದರು.
ಕನ್ನಡ ಭಾಷೆಯನ್ನು ದೈನಂದಿನ ಜೀವನದಲ್ಲಿ ಬಳಸುವುದು, ಕನ್ನಡ ಶಾಲೆಗಳನ್ನು ಪ್ರೋತ್ಸಾಹಿಸುವುದು ಹಾಗೂ ಸಾಹಿತ್ಯದ ಮಹತ್ವವನ್ನು ಮುಂದಿನ ಪೀಳಿಗೆಗೆ ತಿಳಿಸುವುದು ಎಲ್ಲರ ಕರ್ತವ್ಯವಾಗಿದೆ. ಸರ್ಕಾರಿ ನೌಕರರು ಜನರೊಂದಿಗೆ ವ್ಯವಹರಿಸುವಾಗ ಕನ್ನಡಕ್ಕೆ ಆದ್ಯತೆ ನೀಡಿ, ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದು ಕೇವಲ ಕರ್ತವ್ಯವಲ್ಲ, ಅದು ಜವಾಬ್ದಾರಿಯಾಗಿದೆ. ಯಾವುದೇ ಭಾಷೆಯನ್ನು ದ್ವೇಷಿಸದೆ ಎಲ್ಲಾ ಭಾಷೆಗಳನ್ನು ಗೌರವಿಸಬೇಕು ಎಂದರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಪುರಸಭಾ ಮುಖ್ಯಾಧಿಕಾರಿ ಇಂದು ಎಂ. ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ, ಕನಾ೯ಟಕ ಕನ್ನಡ ಜಾಗೃತ ಬಳಗದ ಜಿಲ್ಲಾ ಸದಸ್ಯ ರಾಜೇಶ್ ಕಡಲಕೆರೆ, ಪೊಲೀಸ್ ಉಪ ನಿರೀಕ್ಷಕಿ ಪ್ರತಿಭಾ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಾ. ದೊರೆಸ್ವಾಮಿ ಉಪಸ್ಥಿತರಿದ್ದರು.
ಉಪ ತಹಸೀಲ್ದಾರ್ ರಾಮ್ ಸ್ವಾಗತಿಸಿ ವಂದಿಸಿದರು. ಗ್ರಾಮ ಆಡಳಿತಾಧಿಕಾರಿ ಅಜು೯ನ್ ಸಜ್ಜನ್ ಕಾಯ೯ಕ್ರಮ ನಿರೂಪಿಸಿದರು.

0 Comments