ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ.
ಪ್ರಗತಿ ಪರಿಶೀಲನಾ ತಂಡ ಭೇಟಿ.
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಗೆ ನವೆಂಬರ್ 22, ಶನಿವಾರದಂದು ಶ್ರೀ ಧ.ಮಂ. ಎಜುಕೇಶನ್ ಸೊಸೈಟಿಯ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಧನ್ಯಕುಮಾರ್ ಹಾಗೂ ಅವರ ತಂಡದ ಸದಸ್ಯರು ಶಾಲೆಗೆ ಭೇಟಿ ನೀಡಿದರು.
ಈ ಪರಿಶೀಲನಾ ತಂಡದ ಸದಸ್ಯರು ಶಾಲೆಯ ಎಲ್ಲಾ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದರು.ಎಲ್ಲಾ ತರಗತಿಗಳಿಗೂ ಭೇಟಿ ನೀಡಿ ಮಕ್ಕಳ ಜೊತೆ ಸಂವಾದ ನಡೆಸಿ, ವಿದ್ಯಾರ್ಥಿಗಳ ಪಠ್ಯ ಮತ್ತು ಸಹಪಠ್ಯ ಚಟುವಟಿಕೆಗಳನ್ನು ಅವಲೋಕಿಸಿ ಸೂಕ್ತ ಸಲಹೆ ಸೂಚನೆ ಮತ್ತು ಮಾರ್ಗದರ್ಶನವನ್ನು ನೀಡಿದರು.
ಈ ಶುಭ ಸಂದರ್ಭದಲ್ಲಿ ಗೌರವ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ರಾಜ್ಯದ "ಅತ್ಯುತ್ತಮ ಗ್ರಂಥಪಾಲಕಿ" ಪ್ರಶಸ್ತಿಯನ್ನು ಪಡೆದುಕೊಂಡ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ಮುಖ್ಯ ಗ್ರಂಥಪಾಲಕಿ ಶ್ರೀಮತಿ ಡಾ.ರಜತ ಪಿ. ಶೆಟ್ಟಿ ಇವರನ್ನು ಶಾಲೆಯ ಪರವಾಗಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಯುತ ಜೋಸೆಫ್ P. M ಮತ್ತು ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.

0 Comments