ರಾಜ್ಯ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಪಾಲಡ್ಕದಲ್ಲಿ ಪ್ರತಿಭಟನೆ
ಮೂಡುಬಿದಿರೆ : ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಹಾಗೂ ಗ್ರಾಮ ಪಂಚಾಯತ್,ಸ್ಥಳೀಯ ಆಡಳಿತಕ್ಕೆ ಸೌಲಭ್ಯ ,ಅನುದಾನಗಳನ್ನು ನೀಡದೆ ಜನರನ್ನು ಅಲೆದಾಡುವಂತ ಪರಿಸ್ಥಿತಿ ನಿರ್ಮಾಣ ಮಾಡಿರುವ ಸರಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿಯ ಪುತ್ತಿಗೆ ಮಹಾಶಕ್ತಿಕೇಂದ್ರದ ಪಾಲಡ್ಕ-ಕಡಂದಲೆ ಶಕ್ತಿಕೇಂದ್ರದ ವತಿಯಿಂದ ಪಾಲಡ್ಕ ಪಂಚಾಯತ್ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲಾಧ್ಯಕ್ಷರಾದ ದಿನೇಶ್ ಪುತ್ರನ್ ಅವರು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ಸರ್ಕಾರದ ಧೋರಣೆಯನ್ನು ಖಂಡಿಸಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸುನೀಲ್ ಆಳ್ವ, ಉಸ್ತುವಾರಿ ಈಶ್ವರ್ ಕಟೀಲ್, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ನಾಗೇಶ್ ಅಮೀನ್ ಇರುವೈಲು, ಮಂಡಲ ಕೋಶಾಧಿಕಾರಿ ಪ್ರಭಾಕರ ಕುಲಾಲ್,
ಶಕ್ತಿಕೇಂದ್ರ ಪ್ರಮುಖರಾದ ಸಂತೋಷ್ ಭಂಡಾರಿ ಕಡಂದಲೆ, ಚಂದ್ರಶೇಖರ ಪೂಜಾರಿ, ಮಂಡಲದ ವಿವಿಧ ಜವಾಬ್ದಾರಿಯುತ ಪದಾಧಿಕಾರಿಗಳು, ಪಕ್ಷದ ಪ್ರಮುಖರಾದ ರಮೆಶ್ ಪೂಜಾರಿ, ಮೋಹನ್ ಶೆಟ್ಟಿ, ಸತೀಶ್ ಆಚಾರ್ಯ ಮಾಜಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು , ಪಕ್ಷದ ಕಾರ್ಯಕರ್ತರು ಹಾಗೂ ನಾಗರಿಕರು ಉಪಸ್ಥಿತರಿದ್ದರು.

0 Comments