ಮೂಡುಬಿದಿರೆ : ರಾಜ್ಯ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಹಾಗೂ ಗ್ರಾಮ ಪಂಚಾಯತ್,ಸ್ಥಳೀಯ ಆಡಳಿತಕ್ಕೆ ಸೌಲಭ್ಯ ,ಅನುದಾನಗಳನ್ನು ನೀಡದೆ ಜನರನ್ನು ಅಲೆದಾಡುವಂತ ಪರಿಸ್ಥಿತಿ ನಿರ್ಮಾಣ ಮಾಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿಯ ಶಿರ್ತಾಡಿ, ಮೂಡುಕೊಣಾಜೆ ಹಾಗೂ ಪಡುಕೊಣಾಜೆ ಶಕ್ತಿಕೇಂದ್ರದ ವತಿಯಿಂದ ಸೋಮವಾರ ಶಿರ್ತಾಡಿ ಪಂಚಾಯತ್ ಮುಂಭಾಗ ಪ್ರತಿಭಟನೆ ನಡೆಸಿ ಸರ್ಕಾರದ ಧೋರಣೆಯನ್ನು ಖಂಡಿಸಲಾಯಿತು.
ಈ ಸಂದರ್ಭದಲ್ಲಿ ಮಂಡಲ ಪ್ರಭಾರಿಗಳಾದ ರವೀಂದ್ರ ಶೆಟ್ಟಿ ಉಳಿದೊಟ್ಟು,ಉಸ್ತುವಾರಿ ಈಶ್ವರ್ ಕಟೀಲ್, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಉಪಾಧ್ಯಕ್ಷರಾದ ಸುಕೇಶ್ ಶೆಟ್ಟಿ, ಮಹಾಶಕ್ತಿಕೇಂದ್ರ ಅಧ್ಯಕ್ಷ ಸೋಮನಾಥ್ ಕೋಟ್ಯಾನ್, ಕಾರ್ಯದರ್ಶಿ ಜಯಂತ್ ಹೆಗ್ಡೆ, ಓಬಿಸಿ ಮೋರ್ಚಾದ ಅಧ್ಯಕ್ಷ ಪ್ರದೀಪ್ ಕುಮಾರ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭರತ್ ಶೆಟ್ಟಿ, ಶಿತಾ೯ಡಿ ಗ್ರಾ. ಪಂ. ಮಾಜಿ ಅಧ್ಯಕ್ಷೆ ಲತಾ ಹೆಗ್ಡೆ, ದರೆಗುಡ್ಡೆ ಗ್ರಾ. ಪಂ. ಮಾಜಿ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು, ಲಕ್ಷ್ಮಣ್ ಸುವಣ೯ ವಿಶ್ವನಾಥ್ ಕೋಟ್ಯಾನ್ ಹನ್ನೇರು ಸೇರಿದಂತೆ ಶಕ್ತಿಕೇಂದ್ರ ಪ್ರಮುಖರು, ಪಂಚಾಯತ್ ಮಾಜಿ ಜನಪ್ರತಿನಿಧಿಗಳು, ಪಕ್ಷದ ವಿವಿಧ ಪದಾಧಿಕಾರಿಗಳು , ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು.

0 Comments