ನಿಡ್ಡೋಡಿ :ಇಲ್ಲಿನ ಶ್ರೀ ದುರ್ಗಾದೇವಿ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆ ಹಾಗೂ ಯಶಸ್ವಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಭಾಸ್ಕರ ದೇವಸ್ಯ ಅವರು ಮಾತನಾಡಿ, ಮಕ್ಕಳ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ ಶುಭ ಹಾರೈಸಿದರು.
ವಿಶೇಷ ಅತಿಥಿಯಾಗಿ ಆಗಮಿಸಿದ್ದ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಕುಮಾರಿ ನೇತ್ರಾ ಕೆ. ಅವರು, ಶಾಲಾ ಜೀವನದ ನಂತರದ ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡು ಮಾರ್ಗದರ್ಶನ ನೀಡಿದರು.
ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸೀಮಾ ಅವರು ತಮ್ಮ ಭಾಷಣದಲ್ಲಿ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಾಶಯಗಳನ್ನು ಕೋರಿ, ಜೀವನಕ್ಕೆ ಪೂರಕವಾದ ಮೌಲ್ಯಯುತ ವಿಚಾರಗಳನ್ನು ತಿಳಿಸಿದರು. ಇದೇ ಸಂದರ್ಭದಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗಾಗಿ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿ ರಂಜಿಸಿದರು.
ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಶ್ರೀ ಸಾಗರ್, ಪ್ರಾಂಶುಪಾಲರಾದ ಶ್ರೀಮತಿ ಅನುರಾಧಾ ಎಸ್. ಸಾಲ್ಯಾನ್, ಸಹ ಮುಖ್ಯೋಪಾಧ್ಯಾಯಿನಿ ಕುಮಾರಿ ಜಯಶ್ರೀ ಹಾಗೂ ವಿದ್ಯಾರ್ಥಿ ನಾಯಕ (SPL) ಮಾಸ್ಟರ್ ದಿಶಾನ್ ಎಚ್. ಶೆಟ್ಟಿಗಾರ್ ಉಪಸ್ಥಿತರಿದ್ದರು.

0 Comments